ಬೈಂದೂರು: ತಾಲ್ಲೂಕಿನ ಶಿರೂರು ಗ್ರಾಮದ ಕೋಣಮಕ್ಕಿಯಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿ ಪೌಜಾನ್ ಅಹಮ್ಮದ್ನನ್ನು ಪೊಲೀಸರು ಬಂಧಿಸಿದ್ದಾರೆ.

ಕೋಣಮಕ್ಕಿಯ ಫಾತಿಮಾ ಎಂಬುವರ ಮನೆಗೆ ಅವರು ಮಲಗಿದ್ದ ಸಮಯ ಆರೋಪಿ ಪೌಜಾನ್ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿದ್ದಾನೆ. ಬೀರು ತೆರೆದು ಹುಡುಕಾಡುತ್ತಾ ಕಳ್ಳತನಕ್ಕೆ ಪಯತ್ನಿಸುತ್ತಿದ್ದಾಗ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಹಿಂಬಾಗಿಲಿನಿಂದ ಓಡಿ ಹೋಗಿದ್ದಾನೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.

ಪೌಜಾನ್ ಅಹಮ್ಮದ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆತ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಬೈಕ್ ವ್ಹೀಲಿಂಗ್ ಪ್ರಕರಣದಲ್ಲೂ ಆರೋಪಿಯಾಗಿದ್ದ. ಪಿಎಸ್ಐ ಸುನಿಲ್ ಕುಮಾರ್ ಬಿ.ವೈ. ನೇತೃತ್ವದಲ್ಲಿ ಪಿಎಸ್ಐ ನವೀನ ಪಿ. ಬೋರಕರ, ಸಿಬ್ಬಂದಿ ಚಂದ್ರಶೇಖರ, ಚಿದಾನಂದ, ಮಾಳಪ್ಪ ದೇಸಾಯಿ, ರಾಮದಾಸ್ ಅವರ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-28-1114186480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.