ಬೈಂದೂರು: ಸಹಕಾರಿ ಕ್ಷೇತ್ರದಲ್ಲಿನ ಅಪಾರ ಅನುಭವ ಹೊಂದಿರುವ ಎಸ್. ರಾಜು ಪೂಜಾರಿ ನೇತೃತ್ವದಲ್ಲಿ ಶ್ರೀರಾಮ ಕೋ ಆಪರೇಟಿವ್ ಸೊಸೈಟಿಯು ಏಳನೇ ಶಾಖೆಯನ್ನು ಪ್ರಾರಂಭಿಸಿ ಸಾಧನೆ ಮಾಡಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಉಪ್ಪುಂದದಲ್ಲಿ ಪ್ರಾರಂಭಿಸಿದ 7ನೇ ಶಾಖೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಸಮಗ್ರ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ, ಸಹಕಾರ ಸಂಘಗಳ ಅಭಿವೃದ್ಧಿಯೂ ಅಗತ್ಯ ಎಂದರು.

ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಭಿವೃದ್ಧಿ ಅಧಿಕಾರಿ ವಿಜಯ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ ಶೆಟ್ಟಿ ಬೆಳಪು, ಎಂ. ಮಹೇಶ ಹೆಗ್ಡೆ, ಜೆ.ಡಿ.ನಾಯ್ಕ್ ಭಟ್ಕಳ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ ನಾರಾಯಣ ಹೆಗ್ಡೆ, ಹಿರಿಯರಾದ ಸೂಲಿಯಣ್ಣ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಫಾದರ್ ಫಿಲಿಪ್ ನಲ್ಲಿವಿಳಾ, ಜಿ. ಗೋಕುಲ ಶೆಟ್ಟಿ, ಮೋಹನ ಪೂಜಾರಿ ಉಪ್ಪುಂದ, ಮದನ್ ಕುಮಾರ್ ಉಪ್ಪುಂದ, ಪ್ರದೀಪ ಯಡಿಯಾಳ್, ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ, ಮರವಂತೆ ಬಡಾಕೆರೆ ವ್ಯ.ಸೇ. ಸಂಘದ ಅಧ್ಯಕ್ಷ ಜಗದೀಶ ಪೂಜಾರಿ, ಶೀನ ಪೂಜಾರಿ, ಪ್ರಭಾಕರ ಶೆಟ್ಟಿ, ರಾಜೀವ ಪಡುಕೋಣೆ, ಚಂದ್ರಶೇಖರ ಅಡಿಗ, ಉದ್ಯಾವರ ಮಂಜುನಾಥೇಶ್ವರ ಆರ್ಯುವೇದ ಆಸ್ಪತ್ರೆಯ ಅಧೀಕ್ಷಕ ಡಾ. ನಾಗರಾಜ ಪೂಜಾರಿ ಸಂಸ್ಥೆಯ ಉಪಾಧ್ಯಕ್ಷ ಎಂ. ವಿನಾಯಕ ರಾವ್, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ ರೈ ಕೆ, ಹಿರಿಯ ಸಹಕಾರಿಗಳು, ನಿರ್ದೇಶಕರು ಹಾಗೂ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಸ್.ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-28-1889350346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.