ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಂದೂರು | ₹51.96 ಲಕ್ಷ ಲಾಭ; ಶೇ 13 ಲಾಭಾಂಶ ವಿತರಣೆ

ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೊ– ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ
Published : 18 ಆಗಸ್ಟ್ 2024, 13:30 IST
Last Updated : 18 ಆಗಸ್ಟ್ 2024, 13:30 IST
ಫಾಲೋ ಮಾಡಿ
Comments

ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೊ– ಆಪರೇಟಿವ್ ಸೊಸೈಟಿಯು 2023–24ನೇ ಸಾಲಿನಲ್ಲಿ ₹200 ಕೋಟಿ ವ್ಯವಹಾರ ನಡೆಸಿ ₹51.96 ಲಕ್ಷ ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ 13 ಲಾಭಾಂಶ ನೀಡಲಾಗುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಎಸ್. ರಾಜು ಪೂಜಾರಿ ತಿಳಿಸಿದರು.

ಇಲ್ಲಿ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಸಂಘವು 15 ವರ್ಷ ಪೂರೈಸಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜಿಲ್ಲೆಯಲ್ಲಿ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದರು.

ಗ್ರಾಹಕರ ಸಲಹೆ, ಸೂಚನೆ, ಸಹಕಾರದಿಂದ ಗ್ರಾಮೀಣ ಪ್ರದೇಶದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಸಿಬ್ಬಂದಿಯ ಪ್ರಾಮಾಣಿಕ ಕಾರ್ಯದಕ್ಷತೆ, ಗುಣಮಟ್ಟದ ಸೇವೆಯಿಂದ ಹಂತ ಹಂತವಾಗಿ ಅಭಿವೃದ್ಧಿಯಾಗಿದೆ ಎಂದರು.

ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ ವಾರ್ಷಿಕ ವರದಿ, ಲೆಕ್ಕ ಪರಿಶೋಧನಾ ವರದಿ, ವಾರ್ಷಿಕ ಲೆಕ್ಕಪತ್ರ, ನಿವ್ವಳ ಲಾಭ ವಿಲೇವಾರಿ ಮತ್ತು ವಿತರಣೆ, ಮುಂದಿನ ಸಾಲಿನ ಅಂದಾಜು ಬಜೆಟ್ ಮಂಡಿಸಿ, ಅನುಮೋದನೆ ಪಡೆದರು.

ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಪ್ರಶಾಂತ ಪೂಜಾರಿ ಇದ್ದರು. ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಸಿಇಒ ಕೆ. ಕಿಟ್ಟಣ್ಣ ರೈ ನಿರೂಪಿಸಿದರು. ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT