ಬೈಂದೂರು: ಇಲ್ಲಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ಸೋಮವಾರ ಬೆಳಿಗ್ಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಹಾವೇರಿ ಜಿಲ್ಲೆಯ ಆಯುಷ್ (16) ಮೃತ ವಿದ್ಯಾರ್ಥಿ. ಹಾವೇರಿ ಸಮೀಪದ ಕೃಷಿ ನಗರದ ಏಳು ಮಂದಿ ಕನ್ಯಾಕುಮಾರಿ ಪ್ರವಾಸಕ್ಕೆ ಹೊರಟಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗೆ ನಿಲ್ಲಿಸಿ, ಮನೆಯವರೆಲ್ಲ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ನದಿಗೆ ಸ್ನಾನಕ್ಕೆ ತೆರಳಿದ್ದರು. ಹೊಳೆಯ ಆಳ ಇರುವ ಜಾಗದಲ್ಲಿ ಈಜಲು ಹೋಗಿರುವ ಆಯುಷ್ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಜೊತೆಗಿದ್ದ ಸಹೋದರ ವಿಷಯ ತಿಳಿಸಿದ್ದು, ಎಲ್ಲರೂ ಸೇರಿ ಬದುಕಿಸುವ ಪ್ರಯತ್ನ ನಡೆಸಿದರೂ ಕೈಗೂಡಲಿಲ್ಲ. ಮೃತ ಬಾಲಕನ ಹೆತ್ತವರು ಗುಜರಾತ್ನಲ್ಲಿ ನೆಲೆಸಿದ್ದು, ಈತ ಅಲ್ಲಿಯ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಹಕಾರದಿಂದ ಶವವನ್ನು ನೀರಿನಿಂದ ಮೇಲಕ್ಕೆ ತರಲಾಯಿತು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-646132015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.