ಬೈಂದೂರು: ಕಲೆ ಮತ್ತು ಸಂಸ್ಕೃತಿ ಸಮಾಜದ ಅವಿಭಾಜ್ಯ ಅಂಗ. ಕಲಾ ಸಂಸ್ಥೆಗಳು ಊರನ್ನು ಸಾಂಸ್ಕೃತಿಕವಾಗಿ ಸಮೃದ್ಧವನ್ನಾಗಿಸುತ್ತವೆ. ಕ್ರೀಡೆ, ಕಲೆ, ಸಾಹಿತ್ಯದಂತಹ ಸದಭಿರುಚಿಯ ಚಟುವಟಿಕೆಗಳು ದೈನಂದಿನ ಒತ್ತಡಗಳಿಂದ ದೇಹ, ಮನಸ್ಸಿಗೆ ಮರುಚೈತನ್ಯ ತುಂಬುವ ಕಾರ್ಯ ಮಾಡುತ್ತವೆ ಎಂದು ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ್ ಹೇಳಿದರು.

ಇಲ್ಲಿನ ಸುರಭಿ ಕಲಾ ಸಂಸ್ಥೆಯ ರಜತಯಾನದ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ, ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಇದೇ 5ರಿಂದ 7ರವರೆಗೆ ನಡೆಯುವ ‘ಯಕ್ಷ ಗೊಂಬೆ ವೈಭವ’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಮಾತನಾಡಿ, ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6.30ಕ್ಕೆ ಕಾರ್ಯಕ್ರಮ ನಡೆಯಲಿದೆ. 5ರಂದು ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್ ಉದ್ಘಾಟಿಸುವರು. ಮೂರು ದಿನ ವಿವಿಧ ಗಣ್ಯರು ಭಾಗವಹಿಸಲಿದ್ದು, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸಮಾರೋಪ ಭಾಷಣ ಮಾಡುವರು ಎಂದು ತಿಳಿಸಿದರು.

5ರಂದು ಉಪ್ಪಿನಕುದ್ರು ಶ್ರೀಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯಿಂದ ‘ಚೂಡಾಮಣಿ– ಲಂಕಾದಹನ’ ಗೊಂಬೆಯಾಟ, ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಲಿದೆ. 6ರಂದು ಚಿಕ್ಕಮಗಳೂರಿನ ಶ್ರೀರೇಣುಕಾಮಾತೆ ತೊಗಲುಗೊಂಬೆ ಮೇಳ ಅಂಬಳೆ ತಂಡದಿಂದ ‘ಸುಪ್ರಭಾ ವಿಲಾಸ’ ತೊಗಲು ಗೊಂಬೆಯಾಟ ನಡೆಯಲಿದೆ. 7ರಂದು ಇಂದ್ರಾಳಿ ಯಕ್ಷಗಾನ ಕೇಂದ್ರದಿಂದ ‘ಜಟಾಯು ಮೋಕ್ಷ’ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸಮಷ್ಟಿ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಸುನಿಲ್ ಎಚ್.ಜಿ, ಸುರಭಿ ನಿರ್ದೇಶಕ ಸುಧಾಕರ ಪಿ. ಬೈಂದೂರು, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ, ಉಪಾಧ್ಯಕ್ಷ ಲಕ್ಷ್ಮಣ ಕೊರಗ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.