ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಹೈಡ್ರೋಕ್ಲೋರಿಕ್ ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಪಲ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹೈಡ್ರೋಕ್ಲೋರಿಕ್  ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಭಾನುವಾರ ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್‌ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ‌ ಅಪಾಯದಿಂದ ಪಾರಾಗಿದ್ದಾರೆ.

ಟ್ಯಾಂಕರ್ ಕಾರವಾರದಿಂದ ಮಂಗಳೂರಿಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ಅಪಘಾತದ ಬಳಿಕ ಹೈಡ್ರೋ ಕ್ಲೋರಿಕ್ ಗ್ಯಾಸ್ ಸೋರಿಕೆಯಾಗುತ್ತಿದ್ದು ಆತಂಕ ಸೃಷ್ಟಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಕುಂದಾಪುರ ಆಗ್ನಿಶಾಮಕ ದಳ ಕಾರ್ಯಚರಣೆ ನಡೆಸಿದ್ದು, ಸೋರಿಕೆ ತಡೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು