ಮಂಗಳವಾರ, ಸೆಪ್ಟೆಂಬರ್ 17, 2019
21 °C

ಉಡುಪಿ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನಿಗೆ ಗಂಭೀರ ಗಾಯ 

Published:
Updated:

ಉಡುಪಿ: ಕರಾವಳಿ ಬೈಪಾಸ್ ಬಳಿಯ ಲಕ್ಷ್ಮಿ ಸಭಾಭವನದ ಎದುರಿನ ವಿದ್ಯುತ್‌ ಕಂಬಕ್ಕೆ ಶುಕ್ರವಾರ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾರು ಸಂತೆಕಟ್ಟೆಯಿಂದ ಉಡುಪಿಗೆ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಸಿಲುಕಿದ್ದ ಚಾಲಕ ಆನಂದ ಪದ್ಮನಾಭ ಎಂಬುವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Post Comments (+)