ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಹೊತ್ತಿ ಉರಿದ ಕಾರು: ಇಬ್ಬರು ಪಾರು

Published 28 ಜೂನ್ 2024, 14:01 IST
Last Updated 28 ಜೂನ್ 2024, 14:01 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಎಂಐಟಿ ಬಳಿ ಬಬ್ಬುಸ್ವಾಮಿ ದೈವಸ್ಥಾನದ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಗುರುವಾರ ತಡರಾತ್ರಿ ಹೊತ್ತಿ ಉರಿದಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಮಣಿಪಾಲದ ಆಸ್ಪತ್ರೆಗೆ ರೋಗಿಯನ್ನು ಕರೆ ತಂದಿದ್ದ ಬೈಂದೂರು ಕಿರಿಮಂಜೇಶ್ವರದ ಗಣೇಶ್‌ ಎಂಬುವವರು ಹಾಗೂ ಗೆಳೆಯ, ರಸ್ತೆ ಬದಿ ಕಾರು ನಿಲ್ಲಿಸಿ ಮಲಗಿದ್ದರು. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚರಗೊಂಡ ಇಬ್ಬರೂ ಕಾರಿನಿಂದ ಹೊರ ಬಂದಿದ್ದಾರೆ.

ಉಡುಪಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT