ಉಡುಪಿ: ಮಣಿಪಾಲದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಿರುವ ಆರೋಪದಡಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರಿಗೆ ಘೋಷಿಸಿದ್ದ ‘ಉತ್ತಮ ಶಿಕ್ಷಕ’ ಪ್ರಶಸ್ತಿ ತಡೆಹಿಡಿದ ಸರ್ಕಾರದ ನಿರ್ಧಾರ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಈಚೆಗೆ ಪ್ರತಿಭಟನೆ ಹಮ್ಮಿಕೊಂಡಿತ್ತು. ‘ಮುಖ್ಯ ಮಂತ್ರಿಯನ್ನು ಅವಮಾನಿಸಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಸೌರವ್ ಬಲ್ಲಾಳ್ ದೂರು ನೀಡಿದ್ದರು.
‘ನನ್ನ, ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿ ಗೆಡುವುದಿಲ್ಲ’ ಎಂದಿದ್ದಾರೆ ಯಶ್‌ಪಾಲ್.