ಗೋಹತ್ಯೆಯಾದರೆ ದಾವೆ: ವಿಎಚ್‌ಪಿ, ಬಜರಂಗದಳ

7

ಗೋಹತ್ಯೆಯಾದರೆ ದಾವೆ: ವಿಎಚ್‌ಪಿ, ಬಜರಂಗದಳ

Published:
Updated:

ಉಡುಪಿ: ಬಕ್ರೀದ್ ಹಬ್ಬದ ಸಂದರ್ಭ ಜಾನುವಾರುಗಳನ್ನು ಹತ್ಯೆ ಮಾಡದೆ ಅಹಿಂಸಾತ್ಮಕವಾಗಿ ಹಬ್ಬ ಆಚರಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಆಗ್ರಹಿಸಿದೆ. 

ಕೋರ್ಟ್ ಆದೇಶದಂತೆ ಬಕ್ರೀದ್ ಹಬ್ಬದ ಸಂದರ್ಭ ಜಾನುವಾರು ಹತ್ಯೆ ಖಂಡನೀಯ. ಅಕ್ರಮ ಜಾನುವಾರು ಸಾಗಣೆ ಹಾಗೂ ಹತ್ಯೆ ತಡೆಗೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಕ್ರಮ ತೆಗೆದುಕೊಳ್ಳಬೇಕು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್ ಒತ್ತಾಯಿಸಿದರು.

ರಾಜ್ಯದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧವಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಜ್ಯ ಹೈಕೋರ್ಟ್ 2000ರಲ್ಲಿ, ಸುಪ್ರೀಂ ಕೋರ್ಟ್ 2006ರಲ್ಲಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ
ಒಂಟೆ-ಗೋವುಗಳ ಸಾಗಣೆ ಹಾಗೂ ಹತ್ಯೆಯನ್ನು ತಡೆಗಟ್ಟುವಂತೆ ಎಲ್ಲ ಜಿಲ್ಲಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಭೆನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಗೋಸಾಗಣೆ ಹಾಗೂ ಹತ್ಯೆ ತಡೆಗೆ ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳು ಕೋರ್ಟ್ ಆದೇಶಗಳನ್ನು ಪಾಲಿಸದಿದ್ದರೆ, ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಬಜರಂಗ ದಳದ ಪ್ರಾಂತ ಸಂಚಾಲಕ ಕೆ.ಆರ್.ಸುನೀಲ್, ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಪ್ರಮೋದ್, ದುರ್ಗಾ ವಾಹಿನಿಯ ಸಹಸಂಚಾಲಕಿ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !