ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಜೆ: ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಎಫ್‌ಐಆರ್

fir dc
Last Updated 6 ಜುಲೈ 2022, 15:18 IST
ಅಕ್ಷರ ಗಾತ್ರ

ಉಡುಪಿ: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಆದೇಶವನ್ನು ಕೆಲವರು ತಿದ್ದುಪಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ದಾಖಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಚ್ಚರಿಕೆ ನೀಡಿದ್ದಾರೆ.

ಜುಲೈ 1ರಂದು ಮಳೆ ಕಾರಣಕ್ಕೆ ರಜೆ ಘೋಷಿಸಲಾಗಿದ್ದ ಆದೇಶದ ಪ್ರತಿಯನ್ನು ದಿನಾಂಕ ಬದಲಿಸಿ ಜುಲೈ 5ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ವದಂತಿ ಹಬ್ಬಿಸಲಾಗಿತ್ತು. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಆದರೆ, ಜೂನ್ 30ರಂದು ಸಂಜೆ ಹೆಬ್ರಿ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.

ವದಂತಿ ಹಬ್ಬಿಸುವ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಠಾಣೆಯಲ್ಲಿ ದೂರು ನೀಡಿದ್ದು ಎಫ್.ಐ.ಆರ್ ದಾಖಲಾಗಿದೆ. ವದಂತಿ ಹಬ್ಬಿಸುವ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ 9480805410 ನೀಡಬಹುದು ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT