ಉಡುಪಿ: ಮಣಿಪಾಲ ಸಮೀಪದ ಸರಳೆಬೆಟ್ಟು ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಸಾತ್ವಿಕ್ ಜೋಷಿ, ಗೋವಿಂದ ಆರ್.ನಾಯರ್, ಅಪೂರ್ವ ರಾಯ್, ಪುನೀತ್, ಅಖಿಲ್ ಮಿಶ್ರಾ, ಶಿಬಾಶಿಶ್ ದಾಸ್, ಯಶ್, ಅನುಜ ಉಮೇಶ ಹಾಗೂ ಕಾಪು ತಾಲ್ಲೂಕಿನ ಬಡಾ ಗ್ರಾಮದ ಉಚ್ಚಿಲದಲ್ಲಿ ಕೆವಿನ್ ಕುಲ್‌ದೀಪ್ ಮಜಲು, ಅಶ್ವಿನ್‌ಪೂಜಾರಿ ವಿರುದ್ಧ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಎಲ್ಲ ಆರೋಪಿಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದದಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.