ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ನಿಯಮ ಮೀರಿ ಡಿಜೆ ಬಳಕೆ, ಪ್ರಕರಣ ದಾಖಲು

Last Updated 2 ಜನವರಿ 2022, 15:56 IST
ಅಕ್ಷರ ಗಾತ್ರ

ಉಡುಪಿ: ಕೋವಿಡ್ ನೈಟ್ ಕರ್ಫ್ಯೂ ಆದೇಶ ಉಲ್ಲಂಘಿಸಿ ಮದುವೆ ಆರತಕ್ಷತೆ ಸಮಾರಂಭದಲ್ಲಿ ಡಿಜೆ ಹಾಕಿದ್ದಕ್ಕೆ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಡುಪಿ ತಾಲ್ಲೂಕು ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ಶಿವರಾಮ್‌ ಶೆಟ್ಟಿಗಾರ್‌ ಎಂಬುವರ ನಿವಾಸದಲ್ಲಿ ನಡೆಯುತ್ತಿದ್ದ ಆರತಕ್ಷತೆಗೆ ಪೂರ್ವಾನುಮತಿ ಪಡೆಯದೆ ರಾತ್ರಿ ಕರ್ಫ್ಯೂ ಆದೇಶ ಉಲ್ಲಂಘಿಸಿ ಮಧ್ಯರಾತ್ರಿ 12.15ರವರೆಗೆ ಡಿಜೆ ಹಾಕಿ ನೃತ್ಯ ಮಾಡಲಾಗುತ್ತಿತ್ತು. ಘಟನೆ ಸಂಬಂಧ ಎರಡು ಡಿಜೆ ಸೌಂಡ್‌ ಬಾಕ್ಸ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT