ಉಡುಪಿ: ‘ಜಾತಿ ಗಣತಿ ಹೆಸರಿನಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ, ಈ ವಿಚಾರದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರ ಜೊತೆ ಇಲ್ಲಿ ಭಾನುವಾರ ಮಾತನಾಡಿದ ಅವರು, ‘ಸರ್ಕಾರವು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಂತ ಮಾಡಬಾರದನ್ನು ಮಾಡುತ್ತಿದೆ, ಹಿಟ್ ಆ್ಯಂಡ್ ರನ್ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವೇ ದೇಶದಾದ್ಯಂತ ಜನ ಗಣತಿ ಮಾಡುತ್ತಿದೆ. ಅಷ್ಟರಲ್ಲಿ ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದಾರೆ, ಈ ಸಮೀಕ್ಷೆಗೆ ದೂರದೃಷ್ಟಿ ಇಲ್ಲ. ದೇಶದಲ್ಲಿರೋದು ಆರೇ ಧರ್ಮಗಳು, ಏಳನೇ ಧರ್ಮ ಇಲ್ಲ. ವೀರಶೈವ ಮತ್ತು ಲಿಂಗಾಯತರು ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಿರಿ, ಧರ್ಮ ಕಾಲಂನಲ್ಲಿ ಹಿಂದೂ ಎಂದು ಬರೆಯಿರಿ ಎಂದು ಹೇಳಿದರು.

’ಕೃಷ್ಣನ ಹೆಸರಿಡಲು ಒತ್ತಾಯ’

ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣನ ಹೆಸರಿಡಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು ಅದನ್ನು ರಾಜ್ಯ ಸರ್ಕಾರ ಒಪ್ಪಬೇಕಾಗುತ್ತದೆ ಆದ್ದರಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದರು. ಕೊಂಕಣ ರೈಲ್ವೆ ಮಾರ್ಗದ ಅಭಿವೃದ್ಧಿಗೆ ವಿಸ್ತೃತ ಯೋಜನೆ ರೂಪಿಸಿದ್ದೇವೆ. ಅದು ಹಾದು ಹೋಗುವ 5 ರಾಜ್ಯಗಳನ್ನೂ ಸಂಪರ್ಕಿಸಿದ್ದೇವೆ ಈಗಾಗಲೇ ಕೇರಳ ಮತ್ತು ಗೋವಾ ರಾಜ್ಯಗಳು ಯೋಜನೆಗಳಿಗೆ ಒಪ್ಪಿಗೆ ನೀಡಿವೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಇನ್ನೂ ಉತ್ತರ ನೀಡಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.