ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಬ್ರಿ: ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 5 ದನಗಳ ರಕ್ಷಣೆ

Last Updated 12 ಜನವರಿ 2023, 16:05 IST
ಅಕ್ಷರ ಗಾತ್ರ

ಹೆಬ್ರಿ: ದನಗಳನ್ನು ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ಗೋಕಳ್ಳರು ಪೊಲೀಸರ ಕೈಗೆ ಸಿಕ್ಕಿಬೀಳುವ ಭಯದಿಂದ ಪರಾರಿಯಾಗಲು ಯತ್ನಿಸುವಾಗ ವಾಹನ ಅಪಘಾತಕ್ಕೀಡಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಹೆಬ್ರಿ ಪಿಎಸ್ಐ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಗುರುವಾರ ಹೆಬ್ರಿಯ ಸೀತಾನದಿಯ ಕೈ ಕಂಬದ ಬಳಿ ವಾಹನಗಳ ತಪಾಸಣೆ ನಡೆಯುತ್ತಿದ್ದಾಗ ನಾಡ್ಪಾಲು ಕಡೆಯಿಂದ ವೇಗವಾಗಿ ವಾಹನ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ವಾಹನವನ್ನು ನಿಲ್ಲಿಸುವಂತೆ ಚಾಲಕನಿಗೆ ಸೂಚನೆ ನೀಡಿದ್ದಾರೆ.

ಆದರೆ, ಚಾಲಕ ವಾಹನವನ್ನು ನಿಲ್ಲಿಸದೆ ವೇಗವಾಗಿ ಚಲಾಯಿಸಿದ್ದಾನೆ. ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ ಬಚ್ಚಪ್ಪು ಎಂಬಲ್ಲಿ ಗೋವುಗಳಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಲ್ಲಿ ಐದು ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT