ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂದಾಪುರ: ಜಾನುವಾರು ಕಳ್ಳತನ ಆರೋಪಿಗಳ ಬಂಧನ

Published : 16 ಸೆಪ್ಟೆಂಬರ್ 2024, 2:52 IST
Last Updated : 16 ಸೆಪ್ಟೆಂಬರ್ 2024, 2:52 IST
ಫಾಲೋ ಮಾಡಿ
Comments

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಬಳಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು, ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಡ್ಜ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಂಗೊಳ್ಳಿಯ ನಾಯಕವಾಡಿ ಎಂಬಲ್ಲಿ ಕಾರ್‌ನಲ್ಲಿ ಬಂದಿದ್ದ ಕಳ್ಳರು ಜಾನುವಾರು ಕಳವು ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ಗುಲ್ವಾಡಿ ಗ್ರಾಮದ ಮೊಹಮ್ಮದ್‌ ಸಿನಾನ್‌ (19), ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮೊಹಮ್ಮದ್‌ ಸಿನಾನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.  ಕಳವು ಮಾಡಿರುವ 3 ಜಾನುವಾರುಗಳನ್ನು ರಕ್ಷಿಸಿ ನೆಂಚಾರು ಗೋಶಾಲೆಗೆ ಬಿಡಲಾಗಿದೆ.

ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಡ್ಜ್ ಕಾರ್
ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಡ್ಜ್ ಕಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT