ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ಸ್ವಾಂತ್ರ್ಯೋತ್ಸವ– ಕೋವಿಡ್‌ ವಾರಿಯರ್ಸ್‌‌ಗೆ ಸನ್ಮಾನ

Last Updated 16 ಆಗಸ್ಟ್ 2021, 1:55 IST
ಅಕ್ಷರ ಗಾತ್ರ

ಬ್ರಹ್ಮಾವರ: ’ವಿದ್ಯಾವಂತರು ಜಾತಿ ಬೇಲಿಗಳನ್ನು ದಾಟಿ ಹೊಸ ಸಮಾಜ ಸೃಷ್ಟಿ ಮಾಡುವ ಕೆಲಸವನ್ನು ಮಾಡಬೇಕು’ ಎಂದು ತಹಶೀಲ್ದಾರ್ ರಾಜಶೇಖರ ಮೂರ್ತಿ ಹೇಳಿದರು.

ಭಾನುವಾರ ಬ್ರಹ್ಮಾವರ ತಾಲ್ಲೂಕು ಮಟ್ಟದ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂದರ್ಭ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಸನ್ಮಾನ: ಕೋವಿಡ್‌ ವಾರಿಯರ್ಸ್‌ ಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಮೀಳಾ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಯಶೋಧಾ, ಆವರ್ಸೆ ಚಂದ್ರಕಲಾ, ಸಾಯಿಬ್ರಕಟ್ಟೆ ಸುಜಿತ್, ಪೇತ್ರಿಯ ಸುಖಾಂತಿ, ಕೊಕ್ಕರ್ಣೆ ಪರಮೇಶ್ವರ್, ಬಾರ್ಕೂರಿನ ನಿತಿನ್, ಸಾಸ್ತಾನದ ಪ್ರಕಾಶ್, ಆಶಾ ಕಾರ್ಯಕರ್ತೆಯರಾದ ಬೈಕಾಡಿ ತುಳಸಿ, ಬೈದೆಬೆಟ್ಟಿನ ದಿವ್ಯಜೋಗಿ, ಪೌರಕಾರ್ಮಿಕ ಚಾಂತಾರಿನ ಕುಮಾರ್, ವಾರಂಬಳ್ಳಿ ಶೇಖರ್, ಗಣೇಶ್ ಅವರನ್ನು ಸನ್ಮಾನಿಸಲಾಯಿತು.

ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ ಹಂದಾಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಇನ್‌ಸ್ಪೆಕ್ಟರ್‌ ಅನಂತ ಪದ್ಮನಾಭ, ಪಿಎಸ್‌ಐ ಗುರುನಾಥ ಬಿ. ಹಾದಿಮನಿ, ಪಿಎಸ್‌ಐ ಸುನಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್, ಹಂದಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಪೂಜಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ವಿ. ಇಬ್ರಾಹಿಂಪುರ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ಉಪ ತಹಶೀಲ್ದಾರ್ ರಾಘವೇಂದ್ರ ಇದ್ದರು. ಕಂದಾಯ ಇಲಾಖೆ ಭವ್ಯಾ ವಂದಿಸಿದರು. ಅಧ್ಯಾಪಕ ಶಶಿಧರ್ ಶೆಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT