ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಲಭ್ಯತೆ ಆಧರಿಸಿ ಯೋಜನೆ ರೂಪಿಸಿ: ಸಿಇಒ ಎಚ್‌.ಪ್ರಸನ್ನ

Last Updated 23 ಸೆಪ್ಟೆಂಬರ್ 2022, 14:20 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಆಧರಿಸಿ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ ಹೇಳಿದರು.

ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಲ ಜೀವನ್ ಮಿಷನ್ ಕಾರ್ಯಕ್ರಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ನೇ ಸಾಲಿನ ಒಳಗೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಜಲಮೂಲಗಳ ಲಭ್ಯತೆಯ ಆಧಾರದಲ್ಲಿ ನೀರು ಸರಬರಾಜು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕಾಪು ತಾಲ್ಲೂಕಿನ ಕುರ್ಕಾಲು, ಮೂಡಬೆಟ್ಟು, ಇನ್ನಂಜೆ, ಪಾಂಗಾಳ, ಏಣಗುಡ್ಡೆ, ಮಟ್ಟು ಮತ್ತು ಕೋಟೆ ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ನೀರು ಪೂರೈಸಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಕಾಮಗಾರಿ ಕೈಗೊಳ್ಳುವ ಬಗ್ಗೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಏಕ ಗ್ರಾಮ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಬಿ.ಟಿ.ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT