ಶುಕ್ರವಾರ, ಫೆಬ್ರವರಿ 3, 2023
15 °C
ಗ್ರಾಮೀಣ ಸ್ವಚ್ಛತಾ ಸೇನಾನಿಗಳ ಶ್ರಮ ಸಾಧನೆಗೆ ಕಾರಣ; ಸಿಇಒ ಎಚ್.ಪ್ರಸನ್ನ

ಗ್ರಾಮೀಣ ಸ್ವಚ್ಛತೆ: ಉಡುಪಿ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಗ್ರಾಮೀಣ ಪ್ರದೇಶಗಳ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಈ ಸಾಧನೆಗೆ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳು ಕಾರಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ ಹೇಳಿದರು. 

ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸ್ವಚ್ಛ ಸಂಭ್ರಮ-ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಸ್ವಚ್ಛತೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿದ್ದು ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ಕೊಟ್ಟರೆ ಆರೋಗ್ಯ ಸಮಸ್ಯೆ ಬಾಧಿಸುವುದಿಲ್ಲ. ಗ್ರಾಮೀಣ ಭಾಗದ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಗ್ರಾಮೀಣ ಸ್ಚಚ್ಛತಾ ಕಾರ್ಯಕರ್ತರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಹೊಸ ಪರಿಕಲ್ಪನೆ ಮೂಡಿಸಿದ್ದಾರೆ ಎಂದರು.

ಸ್ವಚ್ಛತಾ ಕಾರ್ಯಕರ್ತರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು. ಅಪಘಾತ, ಆರೋಗ್ಯ ವಿಮೆ ಸೌಲಭ್ಯ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಅವರನ್ನು ಸನ್ಮಾನಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮಾಧವಿ ಸ್ವಾಗತಿಸಿದರು. ರಘುರಾಮ್ ಕಾರ್ಯಕ್ರಮ ನಿರೂಪಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು