ಉಡುಪಿ: ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಎಸಗಿದ ಆರೋಪದ ಮೇಲೆ ಭಾಷಣಕಾರ್ತಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ, ಗಗನ್ ಕಡೂರು, ಅಭಿನವ ಹಾಲಶ್ರೀ ಸ್ವಾಮೀಜಿ, ರಮೇಶ್, ನಾಯಕ್, ಧನರಾಜ್, ಶ್ರೀಕಾಂತ್, ಪ್ರಸಾದ್ ಬೈಂದೂರು ಎಂಬುವರು ₹ 5 ಕೋಟಿ ವಂಚನೆ ಎಸಗಿದ್ದಾರೆ ಎಂದು ಬೆಂಗಳೂರಿನ ಬಂಡೆಪಾಳ್ಯ ಠಾಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣ ದಾಖಲಿಸಿದ್ದರು.
ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.