ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟ ವ್ಯವಸ್ಥೆ ಬದಲಿಸಿ| ಸ್ವಸ್ಥ ಸಮಾಜ ರೂಪಿಸಿ: ಎನ್‌.ಸಂತೋಷ್ ಹೆಗ್ಡೆ

ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದಲ್ಲಿ ಪತ್ರಕರ್ತರಿಗೆ ಎನ್‌.ಸಂತೋಷ್ ಹೆಗ್ಡೆ ಕಿವಿಮಾತು
Last Updated 19 ಮಾರ್ಚ್ 2023, 16:17 IST
ಅಕ್ಷರ ಗಾತ್ರ

ಉಡುಪಿ: ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತ ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ಭಾನುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ನಿರ್ಮಾಣವಾಗಿರುವ ಭ್ರಷ್ಟ ರಾಜಕೀಯ ವ್ಯವಸ್ಥೆಗೆ ಸಮಾಜವೇ ಕಾರಣವಾಗಿದ್ದು, ಬದಲಾಗದಿದ್ದರೆ ವಿಪತ್ತು ಕಾದಿದೆ ಎಂದು ಎಚ್ಚರಿಕೆ ನೀಡಿದರು.

ಸಂವಿಧಾನದಲ್ಲಿ ನಾಲ್ಕನೇ ಅಂಗವಾಗಿ ಮಾಧ್ಯಮ ಪರಿಗಣಿಸಲಾಗಿದ್ದು ಪತ್ರಕರ್ತರು ವೃತ್ತಿಗೆ ಬದ್ಧವಾಗಿ ಕಾರ್ಯ ನಿರ್ವಹಿಸಬೇಕು. ಶ್ರೀಮಂತಿಕೆಯಿಂದ ಮಾತ್ರ ಅಧಿಕಾರ ಸಿಗುತ್ತದೆ ಎಂಬ ಸಮಾಜದಲ್ಲಿರುವ ಭಾವನೆಯನ್ನು ಮಾಧ್ಯಮಗಳು ಬದಲಿಸಬೇಕು ಎಂದು ಸಲಹೆ ನೀಡಿದರು.

ಹಲವು ಹಗರಣ, ಭ್ರಷ್ಟಾಚಾರಗಳಿಂದ ದೇಶದ ತಿಜೋರಿ ಕೊಳ್ಳೆ ಮಾಡಲಾಗುತ್ತಿದ್ದು ದೇಶದ ಪ್ರಜೆಗಳು ಎಚ್ಚೆತ್ತುಕೊಂಡು ಜವಾಬ್ದಾರಿ ನಿಭಾಯಿಸಬೇಕು. ಅವ್ಯವಹಾರಗಳನ್ನು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಮಾಜದ ನಿರೀಕ್ಷೆಯನ್ನು ಈಡೇರಿಸುವ ಜವಾಬ್ದಾರಿ ಮಾಧ್ಯಮಗಳದ್ದು. ಭರವಸೆ ಕಳೆದುಕೊಳ್ಳದೆ ವೃತ್ತಿಯಲ್ಲಿ ಬದ್ದತೆ, ಜವಾಬ್ದಾರಿ ಪ್ರದರ್ಶಿಸಬೇಕು ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಯು.ಎಸ್.ಶೆಣೈ ಅವರನ್ನು ಸನ್ಮಾನಿಸಲಾಯಿತು. ಇದೇವೇಳೆ ಸ್ಥಾಪಕ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಗೌರವಿಸಲಾಯಿತು. ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ ಅವರ ನಮ್ಮ ಉಡುಪಿ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಶಿರೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಇದ್ದರು.

ರಜತ ಮಹೋತ್ಸವ ಸಮಿತಿಯ ಸಂಚಾಲಕ ಮೊಹಮ್ಮದ್ ಶರೀಫ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ್ ಸುವರ್ಣ ವಂದಿಸಿದರು. ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT