ಉಡುಪಿ: ಮಣಿಪಾಲದ ಮಾಹೆಯಲ್ಲಿ ಈಚೆಗೆ ನಡೆದ ಪುರುಷರ ಚೆಸ್ ಚಾಂಪಿಯನ್ಷಿಪ್ನಲ್ಲಿ ಚೆನ್ನೈನ ಎಸ್ಆರ್ಎಂ ಇನ್ಸ್ಟಿಟ್ಯೂಟ್ ಆಫ್ ಸಯನ್ಸ್ ಆ್ಯಂಡ್ ಟೆಕ್ನಾಲಜಿ ತಂಡ ಅಗ್ರಸ್ಥಾನಿಯಾಗಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾಯಿತು.

ಆಂಧ್ರಪ್ರದೇಶದ ಗುಂಟೂರಿನ ಕೊನೇರು ಲಕ್ಷ್ಮಯ್ಯ ಎಜ್ಯುಕೇಶನ್ ಫೌಂಡೇಷನ್ (ಕೆಎಲ್ಇಎಫ್) ತಂಡ ರನ್ನರ್ಅಪ್ ಪ್ರಶಸ್ತಿಗೆ ಪಾತ್ರವಾಯಿತು.

ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಚೆಸ್ ಚಾಂಪಿಯನ್ ಷಿಪ್ ನಡೆದಿತ್ತು.

ಡಾ.ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ನವದೆಹಲಿಯ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಪರಿವೀಕ್ಷಕ ನರೇಂದ್ರ ಗೌರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಮಾಹೆ ವಿ.ವಿ. ಕ್ರೀಡಾ ಮಂಡಳಿ ಕಾರ್ಯದರ್ಶಿ ವಿನೋದ್ ನಾಯಕ್, ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಾಜ ಗೋಪಾಲ್ ಶೆಣೈ, ಕೆಎಂಸಿ ಡೀನ್ ಡಾ. ಅನಿಲ್ ಕೆ. ಭಟ್, ಸಂಘಟನಾ ಕಾರ್ಯದರ್ಶಿ ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.

ಮಾಹೆ ಕ್ರೀಡಾ ಕೌನ್ಸಿಲ್ ಹೆಚ್ಚುವರಿ ಕಾರ್ಯದರ್ಶಿ ಕುಮಾರ್ ಎಂ.ಆರ್. ಭಟ್ ಸ್ವಾಗತಿಸಿದರು. ಕೆಎಂಸಿ ಮಂಗಳೂರು ಕ್ರೀಡಾ ನಿರ್ದೇಶಕ ಡಾ. ರಾಜು ವಂದಿಸಿದರು. ಎಂಐಯ ಪ್ರಾಧ್ಯಾಪಕ ಡಾ.ರಾಘವೇಂದ್ರ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.