ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳು ಸದೃಢ ಭಾರತದ ಸೃಷ್ಟಿಕರ್ತರು’

‘ಚಿಗುರು' ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ
Last Updated 25 ನವೆಂಬರ್ 2022, 14:48 IST
ಅಕ್ಷರ ಗಾತ್ರ

ಉಡುಪಿ: ದೇಶದ ಭವಿಷ್ಯ ನಿರ್ಮಾಣ ಮಾಡುವಲ್ಲಿ ಮಕ್ಕಳ ಪಾತ್ರ ಮಹತ್ವದ್ದು ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಹಾಗೂ ತಾಲ್ಲೂಕು ಘಟಕ ಶುಕ್ರವಾರ ಅಂಬಲಪಾಡಿಯ ಭವಾನಿ ಮಂಟಪದಲ್ಲಿ ಹಮ್ಮಿಕೊಂಡಿದ್ದ ‘ಚಿಗುರು' ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು. ಭಾರತೀಯ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಮಾನಸಿಕ, ಶೈಕ್ಷಣಿಕ, ಬೌದ್ಧಿಕ ಹಾಗೂ ಧಾರ್ಮಿಕವಾಗಿ ಆರೋಗ್ಯಯುತರಾದವರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕೇವಲ ಓದು, ಅಂಕಗಳಿಕೆಗೆ ಮಕ್ಕಳ ಮೇಲೆ ಒತ್ತಡ ಹಾಕಿದರೆ ಮಕ್ಕಳು ಮಾನಸಿಕವಾಗಿ ಕುಗ್ಗಲಿದ್ದಾರೆ. ಪಠ್ಯದ ಜತೆಗೆ ಪಠ್ಯೇತ್ತರ ಚಟುವಟಿಕೆಗಳಲ್ಲೂ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾತನಾಡಿ, ಕರಾವಳಿಯ ಮಕ್ಕಳು ಪ್ರತಿಯೊಂದು ಕ್ಷೇತ್ರಗಳಲ್ಲೂ ಮುಂದಿದ್ದು ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ ಎಂದರು.

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎನ್. ತಿರುಮಲೇಶ್ವರ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯ ಹರೀಶ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ವಿಶ್ವನಾಥ ಶೆಣೈ, ಸಾಫಲ್ಯ ಟ್ರಸ್ಟ್ ಪ್ರವರ್ತಕಿ ನಿರುಪಮಾ ಪ್ರಸಾದ್, ಕಸಾಪ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಚ್. ಚಂದ್ರೇಗೌಡ ಉಪಸ್ಥಿತರಿದ್ದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಉಡುಪಿ ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಇದ್ದರು.

ಕಸಾಪ ಉಡುಪಿ ಅಧ್ಯಕ್ಷ ರವಿರಾಜ್ ಎಚ್. ಪಿ. ಸ್ವಾಗತಿಸಿದರು. ಪತ್ರಕರ್ತ ಕಿರಣ್ ಮಂಜನಬೈಲು ವಂದಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿದರು. ಕವಯತ್ರಿ ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT