ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿಯಲ್ಲಿ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

Last Updated 12 ಅಕ್ಟೋಬರ್ 2021, 13:39 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಿತು. ಆಸ್ಪತ್ರೆಯಲ್ಲಿ ಅ.11 ರಂದು ಜನಿಸಿದ ನವಜಾತ ಹೆಣ್ಣು ಶಿಶುಗಳಿಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಗೌರವ ನೀಡುವ ಮೂಲಕ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಲಾಯಿತು.

ಬಳಿಕ ಮಾತನಾಡಿದ ಅವರು, ಹೆಣ್ಣುಮಗುವಿಗೆ ಸರಿಯಾದ ಶಿಕ್ಷಣ, ಆರೋಗ್ಯ, ಶಿಕ್ಷಣ ಹಾಗೂ ಸಮಾನ ಹಕ್ಕು ಹಾಗೂ ಅವಕಾಶಗಳನ್ನು ನೀಡುವುದು ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಮುಖ್ಯ ಉದ್ದೇಶ ಎಂದರು.

ಲಿಂಗ ತಾರತಮ್ಯ, ಹಿಂಸೆಯಿಂದ ಮಹಿಳೆಯರಿಗೆ ರಕ್ಷಣೆ ನೀಡುವುದು ಆದ್ಯ ಕರ್ತವ್ಯವಾಗಬೇಕು. ಹೆಣ್ಣು ಪ್ರಪಂಚದ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುತ್ತಿದ್ದು, ಅಭಿವೃದ್ಧಿಯ ವೇಗಕ್ಕೆ ಶಕ್ತಿಯಾಗಿದ್ದಾಳೆ ಎಂದು ಅಭಿಪ್ರಾಯಪಟ್ಟರು.

ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಈ ವರ್ಷದ ಘೋಷವಾಕ್ಯ ‘ಡಿಜಿಟಲ್ ಪೀಳಿಗೆ; ನಮ್ಮ ಪೀಳಿಗೆ’ಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT