ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಪೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ 17 ಮಕ್ಕಳ ರಕ್ಷಣೆ

Last Updated 29 ಅಕ್ಟೋಬರ್ 2020, 5:51 IST
ಅಕ್ಷರ ಗಾತ್ರ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸ ಮಾಡುತ್ತಿದ್ದ 17 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

ಗುರುವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳನ್ನು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದರು.

ಕೋವಿಡ್‌ನಿಂದಾಗಿ ಶಾಲೆಗಳು ಆರಂಭವಾಗದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ವಲಸೆ ಕಾರ್ಮಿಕರು ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆ ತಂದಿದ್ದಾರೆ. ರಕ್ಷಣೆ ಮಾಡಲಾಗಿರುವ ಮಕ್ಕಳು ಬಳ್ಳಾರಿ, ಕೊಪ್ಪಳ ಜಿಲ್ಲೆಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT