ಉಡುಪಿ: ಬಾಲ್ಯವಿವಾಹ ಪದ್ಧತಿ ನಿರ್ಮೂಲನೆ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದ್ದು, ಅದಕ್ಕೆ ಒತ್ತು ನೀಡಬೇಕು ಎಂದು ಡಿವೈಎಸ್ಪಿ ಪ್ರಭು ಡಿ.ಟಿ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬಾಲ್ಯವಿವಾಹ ನಿಷೇಧ ಹಾಗೂ ಮಕ್ಕಳ ಸಂಬಂಧಿತ ಕಾನೂನುಗಳ ಬಗ್ಗೆ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೇನರ್ಸ್ಗಳಿಗೆ ಹಮ್ಮಿಕೊಂಡಿದ್ದರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬದಲಾವಣೆಗೊಂಡ ನೂತನ ಚೈಲ್ಡ್ಲೈನ್ ಲೋಗೋವನ್ನು ಹಾಗೂ ಮಿಷನ್ ವಾತ್ಸಲ್ಯ ಮಾರ್ಗಸೂಚಿ ಅನ್ವಯ ಮಕ್ಕಳ ಸುರಕ್ಷಿತ ಸ್ಪರ್ಶ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಲಾಯಿತು.

ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಹಾಗೂ ಹರೀಶ್ ಜೋಗಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಖಾದರಳ್ಳಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂಹಿ ದಾಮೋದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ., ಮಾಸ್ಟರ್ ಟ್ರೈನರ್ಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿದರು. ಸುರಕ್ಷಾ ನಿರೂಪಿಸಿದರು.

ಸಮಾಜದಲ್ಲಿ ಇಂದಿಗೂ ಸಹ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು ಗಂಡು ಮಕ್ಕಳಿಗೆ ಹೋಲಿಸಿದ್ದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ
ಅಬೀದ್ ಗದ್ಯಾಳ ಹೆಚ್ಚುವರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.