ಉಡುಪಿ: ಅಧಿಕಾರಿಗಳು, ಸಿಬ್ಬಂದಿ, ಸರ್ಕಾರೇತರ ಸಂಸ್ಥೆಗಳ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸುವಾಗ ಅವರನ್ನು ಕಾನೂನಾತ್ಮಕ ದೃಷ್ಟಿಯಿಂದ ನೋಡದೆ, ಅವರ ಜೀವನದ ಆಶಾಕಿರಣವಾಗಿ ಆರೈಕೆ, ಪುನರ್ವಸತಿ ಪ್ರಕ್ರಿಯೆಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಪಾಲನ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ರಾಜ್ಯದ 5,970 ಗ್ರಾಮಗಳಲ್ಲಿಯೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿ ಅವರ ಸಮಸ್ಯೆ, ಅಹವಾಲುಗಳನ್ನು ಆಲಿಸಲಾಗಿದೆ ಎಂದು ಹೇಳಿದರು.

ಮಕ್ಕಳ ಸಮಸ್ಯೆಗಳ ಬಗ್ಗೆ ವ್ಯವಹರಿಸುವವರ ಮನೋಭಾವ ಬದಲಾಗಬೇಕು. ಮಕ್ಕಳಿಗೆ ಸಂಬಂಧಿಸಿದ ಮನೋ ವೈಜ್ಞಾನಿಕ ಪುಸ್ತಕಗಳನ್ನು ಹೆಚ್ಚು ಓದಿದಾಗ ಮನೋಭಾವದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು.

ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕಿ ಹಲಿಮಾ ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ತಮ್ಮಲ್ಲಿಗೆ ಬರುವ ಮಕ್ಕಳು ಇನ್ಯಾರದೊ ಎಂದು ತಾತ್ಸಾರ ಮಾಡದೆ ಆ ಜಾಗದಲ್ಲಿ ತಮ್ಮದೇ ಮಕ್ಕಳಿದ್ದಾಗ ಯಾವ ರೀತಿ ಪ್ರೀತಿ, ಕಾಳಜಿ ತೋರುತ್ತೇವೆಯೋ ಅದೇ ರೀತಿ ಸಂವೇದನೆ ತೋರಬೇಕು ಎಂದರು.

ಡಿವೈಎಸ್ಪಿ ಪ್ರಭು ಡಿ.ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಭಾನುಮತಿ, ಮಕ್ಕಳ ರಕ್ಷಣಾ ಘಟಕದ ನಾಗರತ್ನ ಭಾಗವಹಿಸಿದ್ದರು.

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಬಾಲನ್ಯಾಯ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇರಬೇಕು. ಮಕ್ಕಳಿಗೆ ಸಂಬಂಧಿಸಿದ ದೂರುಗಳನ್ನು ಬರೆಯುವಾಗ ಸ್ಪಷ್ಟತೆ ಇರಬೇಕು
ಹಲಿಮಾ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.