ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶುಗಳ ಕೇಸ್ಶೀಟ್ಗಳಲ್ಲಿ ಮಕ್ಕಳ ಹೆಸರು, ತಂದೆ-ತಾಯಿಗಳ ಹೆಸರು ನಮೂದಿಸದೇ ಇರುವುನ್ನು ಕಂಡು, ಸರಿಯಾಗಿ ಕಾರ್ಯ ನಿರ್ವಹಿಸದ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ನವಜಾತ ಶಿಶು ಚಿಕಿತ್ಸಾ ಘಟಕದಲ್ಲಿ ನವಜಾತ ಶಿಶುಗಳಿಗೆ ಆರೈಕೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ರಿಜಿಸ್ಟರ್ಗಳನ್ನು ಹಾಗೂ ಕಡತಗಳನ್ನು ಪರಿಶೀಲಿಸಿ, ಸರ್ಕಾರದ ಮಾರ್ಗಸೂಚಿ ಅನ್ವಯ ರಿಜಿಸ್ಟರ್ಗಳನ್ನು ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.

ತಾಯಿ ಆರೈಕೆ ಘಟಕ ಹಾಗೂ ಹಾಲುಣಿಸುವ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಅವ್ಯವಸ್ಥೆ ಕಂಡು ಮೂಲ ಸೌಕರ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಕಲ್ಪಿಸಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರ ಇಲ್ಲದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೇಂದ್ರವನ್ನು ಕೂಡಲೇ ತೆರೆಯಬೇಕೆಂದು ತಿಳಿಸಿದರು.

ನಗರದ ಆದರ್ಶ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿ ನೀಡಿ, ಅಲ್ಲಿನ ಕಡತಗಳು, ನಿಗದಿತ ನಮೂನೆಯ ರಿಜಿಸ್ಟರ್ಗಳ ನಿರ್ವಹಣೆ, ಸೂಚನಾ ಫಲಕಗಳ ಅಳವಡಿಕೆ ಮೊದಲಾದವುಗಳನ್ನು ಪರಿಶೀಲಿಸಿದರು.

ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವ ಮುನ್ನ ಸರ್ಕಾರದ ಪೋರ್ಟಲ್ ಬಾಲಿಕಾ ಸಾಫ್ಟ್ವೇರ್ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದರು.

ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆ, ಹಂದಾಡಿಯ ಗ್ರಾಮ ಪಂಚಾಯಿತಿ ಕಚೇರಿ, ಅಲ್ಲಿನ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಉಪಸ್ಥಿತರಿದ್ದರು.

ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಎಲ್ಲಾ ಕಚೇರಿಗಳಲ್ಲಿ ನಮೂದಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆ ಮಕ್ಕಳ ರಕ್ಷಣಾ ಸಮಿತಿ ಸಭೆ ಶಿಕ್ಷಣ ಕಾರ್ಯಪಡೆ ಸಭೆ ನಡೆಸಬೇಕು.
ಶಶಿಧರ ಎಸ್. ಕೋಸಂಬೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.