ಮಂಗಳವಾರ, ಜನವರಿ 21, 2020
28 °C
ಉಡುಪಿ

ಮಕ್ಕಳ ಮಾರಾಟ ಯತ್ನ: ಇಬ್ಬರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮ‌ಕ್ಕಳನ್ನು ಸಾಕಲು ಸಾಧ್ಯವಾಗದೆ ಮಾರಾಟ ಮಾಡಲು ಯತ್ನಿಸಿದ ಕೃತ್ಯ ಸೋಮವಾರ ನೀರೆ ಗ್ರಾಮದಲ್ಲಿ ನಡೆದಿದ್ದು, ಸುದ್ದಿ ತಿಳಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

ನೀರೆ ಗ್ರಾಮದ ಆನಂದ ಅವರಿಗೆ ನಾಲ್ಕು ವರ್ಷದ ಗಂಡು ಹಾಗೂ ಮೂರು ವರ್ಷದ ಹೆಣ್ಣು ಮಗು ಇದ್ದು, ಪತ್ನಿ ಕೆಲ ವರ್ಷಗಳ ಹಿಂದೆಯೇ ಮಕ್ಕಳನ್ನು ಬಿಟ್ಟು ಹೋಗಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಸಾಧ್ಯವಾಗದೆ ಆನಂದ ಮಕ್ಕಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‌ನೀರೆ ಗ್ರಾಮ ಪಂಚಾಯಿತಿ ಸಿಬ್ಬಂದಿ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಸಂತೆಕಟ್ಟೆಯಲ್ಲಿರುವ ಕೃಷ್ಣಾನುಗ್ರಹ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾ ಅಧಿಕಾರಿ ಸದಾನಂದ ನಾಯಕ್, ಕಾನೂನ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ನೀರೆ ಗ್ರಾಮ ಪಂಚಾಯ್ತಿ ಪಿಡಿಒ ಅಂಕಿತಾ ನಾಯಕ್, ಸದಸ್ಯರಾದ ಹೈದರ್ ಅಲಿ, ಪ್ರೇಮಾವತಿ ನಾಯಕ, ಗ್ರಾಮ ಲೆಕ್ಕಾಧಿಕಾರಿ ವಸಂತ ಪೂಜಾರಿ, ಗಣೇಶ್, ಸಾಹಿಲ್ ಶೆಟ್ಟಿ, ಸುನಂದ ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು