ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳು ಮಹಿಳೆಯರ ಘನತೆಗೆ ಕುಂದು ತರಬಾರದು

ಮಾಧ್ಯಮ ಪ್ರತಿನಿಧಿಗಳಿಗೆ, ಪೊಲೀಸರಿಗೆ ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಅರಿವು
Last Updated 24 ಜನವರಿ 2019, 14:14 IST
ಅಕ್ಷರ ಗಾತ್ರ

ಉಡುಪಿ: ಮಕ್ಕಳು ಹಾಗೂ ಮಹಿಳೆಯರ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಗಾರರು ಸುದ್ದಿ ಬರೆಯುವಾಗ ಮಗು ಮತ್ತು ಮಹಿಳೆಯರ ಘನತೆಯನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಸಲಹೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯತ್‍ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ಹಾಗೂ ಮಕ್ಕಳ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದೆ ಮಕ್ಕಳು ಹಾಗೂ ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಸ್ವಾತಂತ್ರ್ಯ ನಂತರ ಹಲವು ಬದಲಾವಣೆಗಳಾಗಿದ್ದು, ಮಗು ಜನಿಸಿದಾಗಿನಿಂದ ಬೆಳೆಯುವ ಪ್ರತಿ ಹಂತದಲ್ಲೂ ಪೂರಕವಾಗುವಂತಹ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಸಾರ್ವಜನಿಕರಿಗೆ ಇದರ ಮಾಹಿತಿ ತಲುಪಬೇಕಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯಕ್ರಮಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗಬೇಕು. ಅಪರಿಚಿತ ಮಗುವಿನ ಕುರಿತು ಸುದ್ದಿ ಬರೆಯುವಾಗ ವಿಶೇಷ ನ್ಯಾಯಾಲಯದ ಅನುಮತಿ ಪಡೆಯಬೇಕಾಗುತ್ತದೆ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿ ಸಂಘರ್ಷಕ್ಕೆ ಒಳಗಾದ ಮಗುವಿನ ಸ್ವ-ಹಿತಾಸಕ್ತಿಯನ್ನು ಕಾಪಾಡುತ್ತದೆ. ಮಕ್ಕಳ ಮತ್ತು ಮಹಿಳೆಯರ ವಿಚಾರವನ್ನು ಮಾಧ್ಯಮಗಳು ಟಿಆರ್‌ಪಿಗಾಗಿ ವೈಭವೀಕರಿಸಬಾರದು ಎಂದು ಸಲಹೆ ನೀಡಿದರು.

ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ಕುರಿತು ಸುದ್ದಿ ನೈಜವಾಗಿರಬೇಕು. ಮಕ್ಕಳು ಹಾಗೂ ಕುಟುಂಬದವರನ್ನು ಭಯಪಡಿಸುವಂತಿರಬಾರದು. ಅನ್ಯಾಯಕ್ಕೊಳಗಾದ ಮಕ್ಕಳನ್ನು ವಿಚಾರಣೆ ನಡೆಸುವಾಗ ಪೊಲೀಸರು ಇತರೆ ಅಪರಾಧಿಗಳೊಂದಿಗೆ ವರ್ತಿಸುವಂತೆ ವರ್ತಿಸಬಾರದು ಎಂದು ಕಿವಿಮಾತು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ವನಿತಾ ಎನ್.ತೊರವಿ ಇದ್ದರು. ಮಣಿಪಾಲದ ಸ್ಕೂಲ್ ಆಫ್ ಕಮ್ಯುನಿಕೇಶನ್‍ನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಶುಭ, ನಟ, ನಿರ್ಮಾಪಕ ಸುಚೇಂದ್ರ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವೀಸ್, ಮಕ್ಕಳ ಕಲ್ಯಾಣ ಸಮಿತಿಯ ಮೋಹನ್ ಸಾಲಿಕೇರಿ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಸ್ವಾಗತಿಸಿದರು, ಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT