ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರವಂತೆ: ಮಕ್ಕಳ ಹಕ್ಕುಗಳ ಮಾಹಿತಿ

Last Updated 14 ನವೆಂಬರ್ 2022, 5:32 IST
ಅಕ್ಷರ ಗಾತ್ರ

ಬೈಂದೂರು: ‘18 ವರ್ಷ ಪ್ರಾಯದ ಕೆಳಗಿನವರನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅವರಿಗೆ ಮತದಾನದ ಅವಕಾಶವನ್ನು ಹೊರತುಪಡಿಸಿ, ಹಿರಿಯರಿಗಿರುವ ಎಲ್ಲ ಹಕ್ಕುಗಳೂ ಇವೆ. ಆದುದರಿಂದ ಮಕ್ಕಳು ಇಂದಿನ ಪ್ರಜೆಗಳು ಎಂದು ಜಾಗತಿಕವಾಗಿ ಗುರುತಿಸಲಾಗಿದೆ’ ಎಂದು ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಕಾರ್ಯ ನಿರ್ವಾಹಕ ಶ್ರೀನಿವಾಸ ಗಾಣಿಗ ಹೇಳಿದರು.

ಮರವಂತೆ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.

‌ಮುಖ್ಯಶಿಕ್ಷಕ ಸರ್ವೋತ್ತಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಅನಿತಾ ಆರ್.ಕೆ, ಸಿಡಬ್ಲ್ಯೂಸಿ ಸಂಸ್ಥೆಯ ಆಶಾ, ಶಿಕ್ಷಕರು ಇದ್ದರು. ಶಿಕ್ಷಕ ಹಿತೇಶ್ ಶೆಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT