ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೈಸ್ತರಿಂದ ಪವಿತ್ರ ಗುರುವಾರ: ಪಾದ ತೊಳೆದ ಧರ್ಮಾಧ್ಯಕ್ಷರು

ಇಂದು ಶುಭ ಶುಕ್ರವಾರ ಆಚರಣೆ: ಯೇಸುವಿನ ಶಿಲುಬೆಯ ಹಾದಿಯ ಸ್ಮರಣೆ
Last Updated 1 ಏಪ್ರಿಲ್ 2021, 14:31 IST
ಅಕ್ಷರ ಗಾತ್ರ

ಉಡುಪಿ: ಯೇಸು ಕ್ರಿಸ್ತ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರ ಆಚರಣೆಯನ್ನು ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ ಚರ್ಚ್‌ನಲ್ಲಿ ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಚರ್ಚಿನ ಪ್ರಧಾನ ಧರ್ಮಗುರುಬ ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ಕೆನ್ಯೂಟ್ ಆರಾನಾ, ಪಿಲಾರ್ ಸಭೆಯ ಜೊಸ್ಸಿ ಮಸ್ಕರೇನಸ್, ವಂ ಬ್ರಾಯನ್ ಸಿಕ್ವೇರಾ ಇದ್ದರು.

ಧರ್ಮಾಧ್ಯಕ್ಷರಾದ ಜೆರಾಲ್ಡ್ ಐಸಾಕ್ ಲೋಬೊ 12 ಮಂದಿ ಪ್ರೇಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.

ಪೋಪ್‌ ಫ್ರಾನ್ಸಿಸ್‌ ಅವರು ಪಾದ ತೊಳೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಪಾದ ತೊಳೆಯಲು ಅವಕಾಶ ಕಲ್ಪಿಸುವಂತೆ ಆದೇಶ ನೀಡಿದ್ದು ಅದರ ಅನುಸಾರ ಪುರುಷರ ಜತೆಗೆ ಮಹಿಳೆಯರ ಪಾದಗಳನ್ನು ಧರ್ಮಾಧ್ಯಕ್ಷರು ಸೇರಿದಂತೆ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ತೊಳೆಯಲಾಯಿತು.

ಪವಿತ್ರ ಗುರುವಾರದಂದು ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ಮಾಡಿದ್ದರು. ಈ ವೇಳೆ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು.

ಕೋವಿಡ್ ಮಾರ್ಗಸೂಚಿಯಂತೆ ಧಾರ್ಮಿಕ ವಿಧಿಯಲ್ಲಿ ಅಂತರ ಕಾಪಾಡಲಾಯಿತು. ಭಾಗವಹಿಸಿದ್ದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿತ್ತು.

ಪವಿತ್ರ ಗುರುವಾರದ ಅಂಗವಾಗಿ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ಜರುಗಿದವು. ಶುಕ್ರವಾರ ಯೇಸುವನ್ನು ಶಿಲುಬೆಗೇರಿಸಿದ ದಿನವಾವಾಗಿದ್ದು, ಕ್ರೈಸ್ತರು ಶುಭ ಶುಕ್ರವಾರವಾಗಿ ಆಚರಿಸಲಿದ್ದಾರೆ. ಅಂದು ಧ್ಯಾನ, ಉಪವಾಸ ನಡೆಯಲಿದೆ. ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT