ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ವಿಡಿಯೊ ಚಿತ್ರೀಕರಣ ಪ್ರಕರಣ; ಸಿಐಡಿ ಎಡಿಜಿಪಿ ಮನೀಶ್ ಭೇಟಿ

Published 10 ಆಗಸ್ಟ್ 2023, 16:48 IST
Last Updated 10 ಆಗಸ್ಟ್ 2023, 16:48 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೊ ಚಿತ್ರೀಕರಣ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಸಿಐಡಿ ಎಡಿಜಿಪಿ ಮನೀಶ್‌ ಕರ್ಬಿಕರ್‌ ಗುರುವಾರ ಉಡುಪಿಗೆ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು.

ಪ್ರವಾಸಿ ಮಂದಿರದಲ್ಲಿ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಪ್ರಕರಣದ ಮಾಹಿತಿ ಪಡೆದುಕೊಂಡರು. ಬಳಿಕ ಕಾಲೇಜಿಗೆ ತೆರಳಿ ಆಡಳಿತ ಮಂಡಳಿಯ ಪ್ರಮುಖರನ್ನು ವಿಚಾರಿಸಿದರು.

ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು ತನಿಖೆ ಮುಂದುವರಿದಿದೆ. ಸಿಐಡಿ ಡಿವೈಎಸ್‌ಪಿ ಅಂಜುಮಾಲಾ ನಾಯಕ್‌ ತನಿಖಾಧಿಕಾರಿಯಾಗಿದ್ದು ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ಪ್ರಕರಣದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಎಫ್‌ಎಸ್‌ಎಲ್ ವರದಿ ಇನ್ನೂ ಕೈಸೇರಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಎಡಿಜಿಪಿ ಮನೀಶ್‌ ಕರ್ಬಿಕರ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT