ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಅವಶ್ಯ: ಪಲಿಮಾರು ಸ್ವಾಮೀಜಿ

Last Updated 25 ಡಿಸೆಂಬರ್ 2019, 12:52 IST
ಅಕ್ಷರ ಗಾತ್ರ

ಉಡುಪಿ: ಸುರಕ್ಷಿತ ಭಾರತ ನಿರ್ಮಾಣವಾಗಬೇಕಾದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಬೇಕು ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಅಭಿಪ್ರಾಯಪಟ್ಟರು.‌

ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಚಿಣ್ಣರ ಮಾಸೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ‘ಕಾಯ್ದೆ ಜಾರಿಯಿಂದ ಯಾರಿಗೂ ಹಾನಿ ಇಲ್ಲ. ಬದಲಾಗಿ, ಉಗ್ರರ ಹಾವಳಿ ತಪ್ಪಲಿದೆ. ಮಹಿಳೆಯರು ಮಧ್ಯರಾತ್ರಿಯಲ್ಲಿ ಆತಂಕವಿಲ್ಲದೆ ನಡೆದಾಡಬಹುದು’ ಎಂದರು.

ಭಾರತೀಯರಿಗೆ ರಕ್ಷಣೆ ನೀಡುವ ಕಾಯ್ದೆ ಇದಾಗಿದ್ದು, ಎಲ್ಲರೂ ಬೆಂಬಲಿಸಬೇಕು. ಸ್ವಚ್ಛಭಾರತದ ಜತೆಗೆ ಸುಭದ್ರ ಭಾರತ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT