ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌.ಎಸ್‌.ಎಸ್‌ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

Published 1 ಅಕ್ಟೋಬರ್ 2023, 11:22 IST
Last Updated 1 ಅಕ್ಟೋಬರ್ 2023, 11:22 IST
ಅಕ್ಷರ ಗಾತ್ರ

ಬ್ರಹ್ಮಾವರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಐತಿಹಾಸಿಕ ಪ್ರಸಿದ್ಧ ಬಾರ್ಕೂರಿನಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ, ಮಾನವ ಸರಪಣಿ, ಜಾಗೃತಿ ಜಾಥಾ ಮತ್ತು ಶ್ರಮದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಊರಿನ ಹಿರಿಯರಾದ ಸುಧಾಕರ ರಾವ್ ಶುಭ ಹಾರೈಸಿದರು. ಧಾರ್ಮಿಕ ಚಿಂತಕ ದಾಮೋದರ ಶರ್ಮ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವ ತಿಳಿಸಿದರು. ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ಮಂಗಳೂರು ವಿಭಾಗದ ಎನ್.ಎಸ್‌.ಎಸ್ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಏಕನಾಥೇಶ್ವರಿ ದೇವಸ್ಥಾನ ಕ್ಷೇತ್ರದ ಸುತ್ತಮುತ್ತ ಸ್ವಚ್ಛಗೊಳಿಸಿ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ ಇದ್ದರು. ದೇವಸ್ಥಾನದ ಕಾರ್ಯದರ್ಶಿ ನರಸಿಂಹ ದೇವಾಡಿಗ ಸ್ವಯಂ ಸೇವಕರಿಗೆ ಶುಭಹಾರೈಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT