ಮಂಗಳವಾರ, ಮಾರ್ಚ್ 2, 2021
18 °C

ಆನೆಗುಡ್ಡೆ ದೇವಸ್ಥಾನಕ್ಕೆ ಸಿಎಂ ಭೇಟಿ: ಗಣಹೋಮದಲ್ಲಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು

ಉಡುಪಿ: ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು.

ದೇವರಿಗೆ ಪೂಜೆ ಸಲ್ಲಿಸಿ ಗಣಹೋಮದಲ್ಲಿ ಭಾಗವಹಿಸಿ ಪೂರ್ಣಾಹುತಿ ಸಲ್ಲಿಸಿದರು.

ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿರಲಿಲ್ಲ. ಮಾಧ್ಯಮಗಳಿಗೂ ಪ್ರವೇಶ ನಿರಾಕರಿಸಲಾಗಿತ್ತು. ಈಚೆಗಿನ ರಾಜಕೀಯ ಜಂಜಾಟಗಳಿಂದ ವಿಶ್ರಾಂತಿ ಪಡೆಯಲು, ಶಾಂತಿ ನೆಮ್ಮದಿಯಿಂದ ಆಡಳಿತ ದೇವರ ಪೂಜೆ ಹಾಗೂ ಗಣಹೋಮದಲ್ಲಿ ಭಾಗವಹಿಸುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು.

ಇದಕ್ಕೂ ಮೊದಲು ಕಾಪು ತಾಲ್ಲೂಕಿನ ಹೆಜಮಾಡಿ ಮೀನಿಗಾರಿಕಾ ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. 181 ಕೋಟಿ ವೆಚ್ಚದಲ್ಲಿ ಹೆಜಮಾಡಿ ಬಂದರು ನಿರ್ಮಾಣವಾಗುತ್ತಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು