18ರಂದು ಉಡುಪಿಗೆ ಮುಖ್ಯಮಂತ್ರಿ ಯಡಿಯೂರಪ್ಪ
ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜ.18 ಹಾಗೂ 19ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
18ರಂದು ಸಂಜೆ 5ಕ್ಕೆ ಕೃಷ್ಣಮಠದಲ್ಲಿ ನಡೆಯುವ ಪಂಚ ಪರ್ಯಾಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 6.30ಕ್ಕೆ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
19ರಂದು ಬೆಳಿಗ್ಗೆ 9.25ಕ್ಕೆ ಹೆಜಮಾಡಿ ಕೋಡಿಗೆ ಭೇಟಿ ನೀಡಿ, 11.30ಕ್ಕೆ ಕುಂಭಾಶಿಯ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ತೆರಳಲಿದ್ದಾರೆ. ಬಳಿಕ ಕುಂದಾಪುರದ ನ್ಯೂಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.