ಕುಂದಾಪುರ: ಚಂಡಿಕಾ ದುರ್ಗಾ ದೇವಸ್ಥಾನಕ್ಕೆ ಮುಖ್ಯಮಂತ್ರಿ ಭೇಟಿ

ಕುಂದಾಪುರ: ಕುಂಭಾಶಿ ಸಮೀಪದ ಚಂಡಿಕಾ ದುರ್ಗಾ ಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಸ್ಥಾನದ ಆಡಳಿತ ಮಂಡಳಿಯಿಂದ ಮುಖ್ಯಮಂತ್ರಿಗೆ ಪೂರ್ಣಕುಂಭ ಸ್ವಾಗತ ಕೋರಿ, ಗೌರವಿಸಲಾಯಿತು.
ಎರಡು ದಿನಗಳ ಉಡುಪಿ ಪ್ರವಾಸದಲ್ಲಿ ಯಡಿಯೂರಪ್ಪ ಅವರು ಸಾಲು ಸಾಲು ದೇವಸ್ಥಾನಗಳಿಗೆ ಭೇಟಿ ನೀಡಿದ್ದು ವಿಶೇಷವಾಗಿತ್ತು. ಸೋಮವಾರ ಉಡುಪಿಯ ಕೃಷ್ಣಮಠ ಹಾಗೂ ಕರಂಬಳ್ಳಿಯ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರೆ, ಮಂಗಳವಾರ ಕುಂದಾಪುರ ತಾಲ್ಲೂಕಿನ ಕುಂಭಾಶಿಯ ಆನೆಗುಡ್ಡೆ ದೇವಸ್ಥಾನ, ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಯಾನಂದ ಹೋಬಳಿದಾರ, ದೇವಸ್ಥಾನದ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ್, ಅನಿತಾ ಶೇರೆಗಾರ್, ದೇವಳದ ಪ್ರಧಾನ ಅರ್ಚಕ ಅನಂತ ಪುರಾಣಿಕ್ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.