ಮಂಗಳವಾರ, ಜನವರಿ 28, 2020
29 °C

ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮುಂತಾದವರು ಹಾಜರಿದ್ದರು. 

ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಡಾ.ವೀರೇಂದ್ರ ಹೆಗ್ಗಡೆ

ಪೇಜಾವರ ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು.

ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿ ಅವರು, 'ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ. ವಯೋಸಹಜದ ಕಾರಣ ಆರೋಗ್ಯ ಸುಧಾರಣೆ ತಡವಾಗುತ್ತಿದೆ. ಶ್ರೀಗಳಿಗೆ ಬೇರೆ ಯಾವುದೇ ಕಾಯಿಲೆಗಳಿಲ್ಲವಾದ್ದರಿಂದ ಗುಣಮುಖರಾಗುವ ವಿಶ್ವಾಸವಿದೆ. ಅವರ ಆರೋಗ್ಯಕ್ಕೆ ಭಕ್ತರ ಪ್ರಾರ್ಥನೆ ಮುಖ್ಯ' ಎಂದರು.

ಶ್ರೀಗಳ ಅನಾರೋಗ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಇದೇ ವೇಳೆ ವಿರೇಂದ್ರ ಹೆಗ್ಗಡೆ ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು