ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಡುಬಿದ್ರಿ | ಸಹಕಾರಿ ಸಂಸ್ಥೆಗಳತ್ತ ಜನರ ಒಲವು: ರಾಜೇಂದ್ರ ಕುಮಾರ್

ಪಡುಬಿದ್ರಿ ಸಹಕಾರಿ ಸೊಸೈಟಿಯ ನವೀಕೃತ ಪಲಿಮಾರು ಶಾಖೆ ಉದ್ಘಾಟಿಸಿದ ಎಂ.ಎನ್. ರಾಜೇಂದ್ರ ಕುಮಾರ್
Published : 10 ಸೆಪ್ಟೆಂಬರ್ 2024, 6:36 IST
Last Updated : 10 ಸೆಪ್ಟೆಂಬರ್ 2024, 6:36 IST
ಫಾಲೋ ಮಾಡಿ
Comments

ಪಡುಬಿದ್ರಿ: ವಾಣಿಜ್ಯ ಬ್ಯಾಂಕ್‌ಗಳು ವಿಲೀನದಿಂದ ಸಂಕುಚಿತಗೊಂಡಿದ್ದು, ಜನರು ಖಾಸಗಿ ಬ್ಯಾಂಕ್‌ಗಳಿಂದ ದೂರವಾಗುತ್ತಿದ್ದಾರೆ. ಜನರೊಂದಿಗೆ ಒಡನಾಟ, ಸೇವೆ, ಸಾಮಾಜಿಕ ಕಳಕಳಿಯಿಂದ ಸಹಕಾರಿ ಸಂಸ್ಥೆಗಳು ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ಸೋಮವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ‘ಸಹಕಾರ ಸಂಕೀರ್ಣ’, ನವೀಕೃತ ಹವಾನಿಯಂತ್ರಿತ ಪಲಿಮಾರು ಶಾಖೆ ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬ್ಯಾಂಕ್‌ಗಳ ತವರೂರು. ಇದರಲ್ಲಿ ನಮ್ಮ ಜಿಲ್ಲೆಯದೇ ಆದ ಅನೇಕ ಬ್ಯಾಂಕ್‌ಗಳು ವಿಲೀನಗೊಂಡಿವೆ. ವಾಲ್ಮೀಕಿ ಹಗರಣದಿಂದ ರಾಷ್ಟ್ರೀಕೃತ ಬ್ಯಾಂಕ್ ಶಾಖೆಯಿಂದ ನಗದೀಕೃತ ಕೋಟ್ಯಂತರ ರೂಪಾಯಿ ಇನ್ನೂ ವಾಪಾಸ್‌ ಬಂದಿಲ್ಲ. ಶಾಖಾ ಪ್ರಬಂಧಕರೊಬ್ಬರು ಅಮಾನಾತಾಗಿದ್ದಾರೆ. ಸಹಕಾರಿ ಸಂಘಗಳು ಇಂದು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾನಸಾರವಾಗಿಯೇ ಕಾರ್ಯ ನಿರ್ವಹಿಸುತ್ತವೆ ಎಂದು ಅವರು ಹೇಳಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಸ್ಥೆಯ ಬಗ್ಗೆ ಹೆಮ್ಮೆಯಾಗುತ್ತದೆ. ಭಾರತದ ಬಲಿಷ್ಠ ಹಣಕಾಸು ಸಂಸ್ಥೆಯಾಗಿ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಮತ್ತಷ್ಟು ಕಾಯಕಲ್ಪ ನೀಡುವ ಕಾರ್ಯವನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮಾಡುತ್ತಿದ್ದಾರೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಪಲಿಮಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಡುಪ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಮಾತನಾಡಿದರು. ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಸನ್ಮಾನ: ದ.ಕ. ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ ರಕುಮಾರ್, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಗುತ್ತಿನಾರ್‌ ಶೇಖರ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕ ಶರಣ್‌ ಕುಮಾರ್ ಮಟ್ಟು, ಕಟ್ಟಡದ ಗುತ್ತಿಗೆದಾರರರನ್ನು ಸನ್ಮಾನಿಸಲಾಯಿತು. ವಿವಿಧ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಅಧ್ಯಕ್ಷರನ್ನು ಗೌರವಿಸಲಾಯಿತು. ಮಜಾ ಟಾಕೀಸ್ ಖ್ಯಾತಿಯ ಚಂದ್ರಕಾತ್ ಪಡುಬಿದ್ರಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. 

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ತಾ.ಪಂ. ಮಾಜಿ ಸದಸ್ಯರಾದ ಲಕ್ಷ್ಮಣ್ ಶೆಟ್ಟಿ, ದಿನೇಶ್ ಕೋಟ್ಯಾನ್, ಡಾ.ಪ್ರಭಾ ನಂಬಿಯಾರ್, ಹಾಜಿ ಎಂ.ಪಿ.ಶೇಖಬ್ಬ ಪಲಿಮಾರು, ಉದ್ಯಮಿ ದಿನೇಶ್ ಪ್ರಭು, ನಿರ್ದೇಶಕರಾದ ಶಿವರಾಮ ಶೆಟ್ಟಿ, ವೈ.ಜಿ. ರಸೂಲ್, ಮಾಧವ ಆಚಾರ್ಯ, ರಾಜಾರಾಮ್ ರಾವ್, ಸ್ಟ್ಯಾನಿ ಕ್ವಾಡ್ರಸ್, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ಯಶವಂತ ಪಿ.ಬಿ, ಸುಚರಿತಾ ಎಲ್. ಅಮೀನ್, ಕುಸುಮಾ ಎಂ. ಕರ್ಕೇರ, ಕಾಂಚನಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಸಿಇಒ ನಿಶ್ಮಿತಾ ಪಿ.ಎಚ್, ಶಾಖಾ ಪ್ರಬಂಧಕಿ ಶೋಭಾ ಪುತ್ರನ್ ಇದ್ದರು.

ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರ್ವಹಿಸಿದರು. ಸಹಕಾರಿ ಸಂಸ್ಥೆಯ ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು.

ಪಡುಬಿದ್ರಿ ಸೊಸೈಟಿಗೆ ಮೆಚ್ಚುಗೆ
ಸಹಕಾರಿ ಸಂಸ್ಥೆಗಳಿಂದ ರೈತರಿಗೆ ಸೇವೆ ನೀಡುವುದರೊಂದಿಗೆ ಜನರಿಗೆ ಅನೇಕ ಸೌಲಭ್ಯಗಳನ್ನು ಮಾಡಿಕೊಡುವ ಮೂಲಕ ಸಾಮಾಜಿಕ ಸೆವೆಯಲ್ಲಿ ತೊಡಗಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿರುವ ಪಡುಬಿದ್ರಿ ಸಹಕಾರಿ ಸಂಘವು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹವಾನಿಯಂತ್ರಿತಗೊಂಡಿರುವ ಏಕೈಕ ಸಹಕಾರಿ ಸಂಸ್ಥೆ ಎಂದು ಎಂ.ಎನ್. ರಾಜೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಪಲಿಮಾರು ಶಾಖಾ ಕಟ್ಟಡದ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ₹10 ಲಕ್ಷ ನೀಡುವುದಾಗಿ ಘೋಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT