ಮಂಗಳವಾರ, ಮಾರ್ಚ್ 21, 2023
20 °C

ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಮುನಿಯಾಲಿನಲ್ಲಿ ನಡೆಯಿತು.

ವಾರ್ಷಿಕೋತ್ಸವ ಉದ್ಘಾಟಿಸಿದ ಮೆಸ್ಕಾಂ ನಿರ್ದೇಶಕ ಮುನಿಯಾಲು ದಿನೇಶ ಪೈ ‘ಎಲ್ಲಾ ರಂಗದಲ್ಲೂ ಮುಂದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳವಣಿಗೆಗೆ ಅವಕಾಶವಿದ್ದು ಸ್ಥಳೀಯರು ಇದನ್ನು ಬೆಳೆಸಬೇಕು. ಕಾಲೇಜು ಉತ್ತಮ ಉಪನ್ಯಾಸಕ ವೃಂದ ಹೊಂದಿ
ರುವುದು ಸಂತೋಷದ ವಿಷಯ. ಈಗಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವ್ಯವಸ್ಥೆಯನ್ನು ಸರ್ಕಾರ, ದಾನಿಗಳು, ಹೆತ್ತವರು ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ವಿದ್ಯಾರ್ಥಿಗಳು ಅರಿತುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು’ ಎಂದರು.

ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಮಾತನಾಡಿದರು.

ಪ್ರಾಂಶುಪಾಲ ಧರ್ಮಣ್ಣ ಎಚ್.ಡಿ‌. ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಜ್ಯೋತಿ ಹರೀಶ್, ಲಕ್ಷ್ಮೀವೆಂಕಟರಮಣ ದೇವಸ್ಥಾನದ ಮುಖ್ಯಸ್ಥ ಶ್ರೀಧರ್ ಪೈ, ವಿದ್ಯಾರ್ಥಿ ಕ್ಷೇಮಪಾಲಧಿಕಾರಿ‌ ವಿಶ್ವೇಶ್ವರ ಗಾಂವಕರ್ ಇದ್ದರು.

ಪ್ರಾಧ್ಯಾಪಕ ಕೋಕಿಲ್ ಎಚ್.ಎಸ್. ನಿರೂಪಿಸಿ, ಮಂಜುನಾಥ್ ಆಚಾರ್ಯ ಸ್ವಾಗತಿಸಿ ಉಮೇಶ ಬಿ. ಎಮ್. ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.