ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲೂರಿನಲ್ಲಿ ಶತ‌ ಚಂಡಿಕಾ ಯಾಗದ ಪೂರ್ಣಾಹುತಿ

4 ದಿನಗಳ ಕಾಲ ನಡೆದ ಮಹಾಯಾಗ
Last Updated 27 ಆಗಸ್ಟ್ 2022, 2:38 IST
ಅಕ್ಷರ ಗಾತ್ರ

ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.

ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ನಿವಾಸದಲ್ಲಿ ನಡೆದ ಶತಚಂಡಿ ಯಾಗಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಪೂರ್ಣಾಹುತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುಕುಮಾರ ಶೆಟ್ಟಿ, ‘ನಾಡಿಗೆ ಹಾಗೂ ರಾಷ್ಟ್ರಕ್ಕೆ ಸುಭೀಕ್ಷವಾಗಲಿ ಎನ್ನುವ ನಿಟ್ಟಿನಲ್ಲಿ ಸಂಕಲ್ಪದೊಂದಿಗೆ ಯಾಗ ನಡೆಸಲಾಗಿದೆ. ಈ ಹಿಂದೆಯೂ ಹೇಳಿದಂತೆ ಯಾವುದೇ ಅಧಿಕಾರಕ್ಕಿಂತಲೂ ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಸೇವೆ ಪರಮಾಧಿಕಾರ ಎನ್ನುವ ಸಂತೃಪ್ತಿ ಇದೆ’ ಎಂದರು.

ಬೈಂದೂರು ಕ್ಷೇತ್ರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಬಂದ ಗಣ್ಯರು ಹಾಗೂ ಭಕ್ತರು ಸಾಕ್ಷಿಯಾದರು.

ರಾಜ್ಯದ ಕನ್ನಡ ಮತ್ತು‌ ಸಂಸ್ಕೃತಿ, ಇಂಧನ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗೋಪಾಲಕೃಷ್ಣ ನಾಡ, ಡಾ. ಅತುಲ್ ಕುಮಾರ್ ಶೆಟ್ಟಿ, ರತ್ನಾ ರಮೇಶ್ ಕುಂದರ್, ಬೈಂದೂರು ಬಿಜೆಪಿ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಿಂದೂ ಸಂಘಟನೆ ಪ್ರಮುಖರಾದ ಟಿ. ಶಂಭು ಶೆಟ್ಟಿ, ಪ್ರೇಮಾನಂದ ಶೆಟ್ಟಿ ಕಟ್ಕೆರೆ, ಬಿಜೆಪಿ ಮುಖಂಡರಾದ ರೋಹಿತ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ರೋಹಿತ್ ಕುಮಾರ್ ಶೆಟ್ಟಿ, ಇಂದಿರಾ ಶೆಟ್ಟಿ ಆಲೂರು, ಮಂಜು ಬಿಲ್ಲವ, ಸಾಮ್ರಾಟ್ ಶೆಟ್ಟಿ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT