ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು: ಬಿಜೆಪಿ ಕಾರ್ಯಕರ್ತರಿಗೆ ನುಡಿನಮನ

Last Updated 13 ಜುಲೈ 2021, 3:53 IST
ಅಕ್ಷರ ಗಾತ್ರ

ಬೈಂದೂರು: ಈಚೆಗೆ ನಿಧನರಾದ ಬಿಜೆಪಿ ಕಾರ್ಯಕರ್ತರಾಗಿದ್ದ ಹೇರೂರು ಅಶೋಕಕುಮಾರ ಶೆಟ್ಟಿ ಮತ್ತು ರಾಜೇಶ ಉಪ್ಪಿನಕುದ್ರು ಪಕ್ಷ ಸಂಘಟನೆ ಮತ್ತು ಜನಸೇವೆಗೆ ಆದ್ಯತೆ ನೀಡಿದ್ದರು ಎಂದು ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಾವುಂದ ಮಾಲಸಾ ಮಾಂಗಲ್ಯ ಆರ್ಕೆಡ್‌ನಲ್ಲಿ ಭಾನುವಾರ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಉಭಯರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಅವರು ಮಾತನಾಡಿದರು. ವೃತ್ತಿಪರ ಛಾಯಾಗ್ರಾಹಕರಾಗಿದ್ದ ಅಶೋಕಕುಮಾರ ಶೆಟ್ಟಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತೊಡಗಿಕೊಂಡು ಪಕ್ಷ ಸಂಘಟನೆ ಹಾಗೂ ಗ್ರಾಮಾಭಿವೃದ್ಧಿಗೆ ಶ್ರಮಿಸಿದ್ದರು. ಛಾಯಾಗ್ರಾಹಕರ ನಾಯಕರಾಗಿ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ರಾಜೇಶ ಉಪ್ಪಿನಕುದ್ರು ಸಂಘ ಮತ್ತು ಪಕ್ಷ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಲಸಿಕೆ ಅಭಿಯಾನ, ರಾಮಜನ್ಮ ಭೂಮಿ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದರು ಎಂದರು.

ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ‘ಬಿಜೆಪಿ ಸಕ್ರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಅಶೋಕಕುಮಾರ್ ಶೆಟ್ಟಿ ಮತ್ತು ರಾಜೇಶ ಉಪ್ಪಿನಕುದ್ರು ಅವರ ಅಕಾಲಿಕ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ’ ಎಂದರು.

ಆರ್‌ಎಸ್‌ಎಸ್ ಮಂಗಳೂರು ವಿಭಾಗದ ಸಹ ಕಾರ್ಯವಾಹ ಸುಧೀರ ಸಿದ್ದಾಪುರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ನುಡಿನಮನ ಸಲ್ಲಿಸಿದರು. ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿದರು. ಮಂಡಲ ಅಧ್ಯಕ್ಷ ನೆಲ್ಯಾಡಿ ದೀಪಕಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ವಿಶ್ವನಾಥ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT