ಸೋಮವಾರ, ನವೆಂಬರ್ 28, 2022
20 °C

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೆಪಿಸಿಸಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಅಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್‌ ನೀಡುವಂತೆ ಮೂವರು ಆಕಾಂಕ್ಷಿಗಳು ಕೆಪಿಸಿಸಿ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛೆ ಹೊಂದಿರುವ ಆಕಾಂಕ್ಷಿಗಳು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕು ಎಂಬ ನಿಯಮ ಇರುವ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಹಾಲಿ ಉಡುಪಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಮೇಶ್ ಕಾಂಚನ್‌ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು.

ಕೆಪಿಸಿಸಿ ಸಂಯೋಜಕ ಮುರಳಿ ಶೆಟ್ಟಿ, ಮುಖಂಡರಾದ ಡಾ.ವಿಜಯ್ ಕುಮಾರ್, ವಿಶ್ವಾಸ್ ಅಮೀನ್, ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಸಂದೇಶ್ ಶೆಟ್ಟಿ, ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

ಪ್ರಖ್ಯಾತ್ ಶೆಟ್ಟಿ ಆಕಾಂಕ್ಷಿ:

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಕೂಡ ಉಡುಪಿ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಮುಖಂಡರಾದ ಯತೀಶ್ ಕರ್ಕೇರ, ವಿಶ್ವಾಸ್ ಅಮೀನ್, ರೋಷನ್ ಶೆಟ್ಟಿ, ಪ್ರದೀಪ್ ಅಂಚನ್, ಅಬೂಬಕರ್, ಧನುಷ್ ಶೆಟ್ಟಿ ಇದ್ದರು.

ಮತ್ತೊಬ್ಬರು ಆಕಾಂಕ್ಷಿಯಾಗಿರುವ ಕೃಷ್ಣಮೂರ್ತಿ ಆಚಾರ್ಯ ಕೂಡ ತಮ್ಮ ಬೆಂಬಲಿಗರೊಂದಿಗೆ ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.