ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಕಚೇರಿಗೆ ರಕ್ಷಣೆ ಬೇಡ: ಎಸ್‌ಪಿಗೆ ಮನವಿ

Last Updated 18 ಆಗಸ್ಟ್ 2022, 15:31 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನೀಡಲಾಗಿರುವ ಭದ್ರತೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಗುರುವಾರ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಎಸ್‌ಪಿ ಅಕ್ಷಯ್ ಮಚೀಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರ ರಕ್ಷಣೆಯ ಹೊಣೆ ಇದ್ದು ಇಲಾಖೆಯ ದುರುಪಯೋಗ ಸಲ್ಲದು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಾರೂ ಇಲ್ಲದ ಸಂದರ್ಭ ಕ್ಷುಲ್ಲಕ ವಿಚಾರಕ್ಕಾಗಿ ಕೆಲವು ಬಿಜೆಪಿ ಕಾರ್ಯಕರ್ತರು ಬಂದು ಘೋಷಣೆ ಕೂಗಿದ ಮಾತ್ರಕ್ಕೆ ಕಾಂಗ್ರೆಸ್ ಕಚೇರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭೀತಿ ಉಂಟಾಗಿಲ್ಲ.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ ಇಲಾಖೆ ಕಾಂಗ್ರೆಸ್ ಕಚೇರಿಗೆ ಭದ್ರತೆ ಒದಗಿಸಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇವೆ. ಆದರೆ, ಸಮಾಜದ ಭದ್ರತೆಗೆ ಹಾಗೂ ಕಾನೂನು ಸುವ್ಯವಸ್ಥೆಗೆ ಮೀಸಲಾಗಿರುವ ಪೊಲೀಸರನ್ನು ಕೆಲವು ಕಿಡಿಗೇಡಿಗಳ ದುರ್ವರ್ತನೆ ಪರಿಗಣಿಸಿ ಕಾಂಗ್ರೆಸ್ ಕಚೇರಿಗೆ ಭದ್ರತೆಗೆ ನಿಯೋಜಿಸಿರುವುದು ಜನರ ತೆರಿಗೆ ಹಣ ದುರುಪಯೋಗ ಮಾಡಿದಂತೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾಂಗ್ರೆಸ್ ಕಚೇರಿಗೆ ನಿಯೋಜಿಸಿರುವ ಸಿಬಂದಿಯನ್ನು ಶೀಘ್ರ ತೆರವು ಮಾಡಿಸಬೇಕು. ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ರಕ್ಷಣೆಗೆ ಹಾಗೂ ಕಚೇರಿಯ ಭದ್ರತೆಗೆ ಜೀವ ಪಣಕ್ಕಿಟ್ಟು ಹೋರಾಡಲು ಸಿದ್ಧರಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸದಾಶಿವ ಪೂಜಾರಿ, ಪ್ರಚಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ನವೀನ್ ಶೆಟ್ಟಿ, ಸುಕನ್ಯಾ ಪೂಜಾರಿ, ಸತೀಶ್ ಕುಮಾರ್ ಮಂಚಿ, ಸಾಯಿರಾಜ್ ಕಿದಿಯೂರು, ಭರತ್ ಮಣಿಪಾಲ್, ಪ್ರಮೀಳಾ ಸುವರ್ಣ, ಶಾಲಿನಿ ಪುರಂದರ್ ಸಾಲ್ಯಾನ್, ಗಣೇಶ್, ನಾರಾಯಣ್ ಕುಂದರ್, ಹರೀಶ್ ಕಿಣಿ, ನರಸಿಂಹಮೂರ್ತಿ, ಸತೀಶ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಹಮ್ಮದ್, ಸಂಜಯ್ ಆಚಾರ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT