ಉಡುಪಿ: ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಅನರ್ಹಗೊಳಿಸಿದ್ದನ್ನು ಖಂಡಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.
ಅಜ್ಜರಕಾಡಿನ ಉದ್ಯಾನದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ‘ದೇಶದಲ್ಲಿ ವಿರೋಧ ಪಕ್ಷಗಳ ಧನಿ ಅಡಗಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸತ್ಯದ ಪರವಾಗಿ ಧನಿ ಎತ್ತಿದ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹಗೊಳಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಬಿಜೆಪಿಯ ಬೆದರಿಕೆಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ರಾಹುಲ್ ಗಾಂಧಿಯ ಹೋರಾಟಕ್ಕೆ ಕಾರ್ಯಕರ್ತರು ಬೆನ್ನಿಗಿದ್ದಾರೆ. ಕಾಂಗ್ರೆಸ್ ಧನಿಯನ್ನು ಹತ್ತಿಕ್ಕುವ ಪ್ರಯತ್ನ ಸಫಲವಾಗುವುದಿಲ್ಲ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಎ.ಗಫೂರ್, ಅಮೃತ್ ಶೆಣೈ, ರಮೇಶ್ ಕಾಂಚನ್, ಡಾ.ಸುನಿತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಇಸ್ಮಾಯಿಲ್ ಆತ್ರಾಡಿ, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ರೋಷಣಿ ಒಲಿವೆರಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.