ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ದೇಶ ತಲೆತಗ್ಗಿಸುವಂತಾಗಿದೆ: ವಿನಯಕುಮಾರ್ ಸೊರಕೆ

Last Updated 27 ಜೂನ್ 2022, 3:19 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ, ಕೋಮು ಭಾವನೆ ಕೆರಳಿಸುವ ನಿರ್ಧಾರಗಳಿಂದಾಗಿ ದೇಶದ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿನಯಕುಮಾರ್ ಸೊರಕೆ ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ‍ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪ್ರವಾದಿ ನಿಂದನೆ ಮಾಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ, ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರ ಮೇಲೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿರುವುದು ಮತ್ತು ಯುವ ಜನರ ಭವಿಷ್ಯಕ್ಕೆ ಮಾರಕವಾದ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಅಗ್ನಿಪಥ ಯೋಜನೆಯ ಮೂಲಕ ಸೇನೆಯ ಘನತೆಯನ್ನು ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಮುಖಂಡರ ಮೂಲಕವಾಗಿ ಧರ್ಮ ನಿಂದನೆ ನಡೆಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಇ.ಡಿ ಸುಳಿಯೊಳಗೆ ಸಿಲುಕಿಸಿ, ವಿರೋಧ ಪಕ್ಷವನ್ನು ನಾಶ ಪಡಿಸುವ ಯತ್ನ ನಡೆಯುತ್ತಿದೆ. ಇಂತಹ ಜನ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾಧಿಕ್, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಕೆಪಿಸಿಸಿ ಕಾರ್ಯದರ್ಶಿ ಅಬ್ದುಲ್ ಗಫೂರ್, ಪಕ್ಷದ ಮುಖಂಡರಾದ ಶಿವಾಜಿ ಎಸ್. ಸುವರ್ಣ, ಕೇಶವ್ ಹೆಜ್ಮಾಡಿ, ನವೀನ್ ಎನ್. ಶೆಟ್ಟಿ, ಮೆಲ್ಬಿನ್ ಡಿ ಸೋಜ, ಮಹಮ್ಮದ್ ಫಾರೂಕ್ ಚಂದ್ರನಗರ, ಹರೀಶ್ ನಾಯಕ್, ವೈ. ಸುಕುಮಾರ್, ರಾಜೇಶ್ ಶೆಟ್ಟಿ ಪಾಂಗಾಳ, ಗಣೇಶ್ ಕೋಟ್ಯಾನ್, ಅಶ್ವಿನಿ ಬಂಗೇರ, ಐಡಾ ಗಿಬ್ಬಾ ಡಿ ಸುಧೀರ್ ಕರ್ಕೇರ, ಕರುಣಾಕರ್ ಪೂಜಾರಿ ಪಡುಬಿದ್ರಿ, ಅಮೀರುದ್ದೀನ್ ಕಾಪು, ಗಣೇಶ್ ಆಚಾರ್ಯ, ಮಹೇಶ್ ಶೆಟ್ಟಿ ಕುರ್ಕಾಲು, ಮಾಧವ ಆರ್. ಪಾಲನ್, ಜ್ಯೋತಿ ಮೆನನ್, ತಸ್ನೀನ್ ಅರ್‍ಹಾ, ಗಣೇಶ್ ಕೋಟ್ಯಾನ್, ರಂಜನಿ ಹೆಗ್ಡೆ, ಶೋಭಾ ಬಂಗೇರ, ಫರ್ಜಾನ, ರಾಧಿಕಾ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT