18ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

7

18ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Published:
Updated:
Deccan Herald

ಉಡುಪಿ: ರಪೇಲ್ ಯುದ್ಧ ವಿಮಾನ ಖರೀದಿ ಹಗರಣದಲ್ಲಿ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿ ಸೆ.18ರಂದು ಬೆಳಿಗ್ಗೆ 10ಕ್ಕೆ ಮಣಿಪಾಲದ ಟೈಗರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಪಿಎ ಅವಧಿಯಲ್ಲಿ ಎಚ್ಎ‌ಎಲ್‌ನಿಂದ 126 ಯುದ್ಧ ವಿಮಾನಗಳನ್ನು ಖರೀದಿಸಲು ₹ 90 ಸಾವಿರ ಕೋಟಿ ರೂಪಾಯಿ ಒಪ್ಪಂದವಾಗಿತ್ತು. ಈ ಒಪ್ಪಂದವನ್ನು ಬಿಜೆಪಿ ಸರ್ಕಾರ ರದ್ದುಮಾಡಿ, ಹೊಸ ಒಪ್ಪಂದ ಆಗುವ ಕೆಲವೇ ತಿಂಗಳ ಮುನ್ನ ಹುಟ್ಟಿಕೊಂಡ ರಿಲಯನ್ಸ್ ಡಿಫೆನ್ಸ್ ಸಂಸ್ಥೆಗೆ ಹಾಗೂ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆಗೆ ನೀಡಲಾಗಿದೆ. 36 ಯುದ್ಧ ವಿಮಾನಗಳ ಪೂರೈಕೆಗೆ ₹ 60 ಸಾವಿರ ಕೋಟಿ ಒಪ್ಪಂದವಾಗಿದೆ ಎಂದು ಆರೋಪಿಸಿದ್ದಾರೆ. 

ಪ್ರತಿ ವಿಮಾನಕ್ಕೆ ₹ 1,660 ಕೋಟಿಯಂತೆ ದರನಿಗದಿಮಾಡಲಾಗಿದ್ದು, ಇದೊಂದು ಬಹುದೊಡ್ಡ ಹಗರಣ. ಈ ಸತ್ಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತೋನ್ಸೆಯವರು ತಿಳಿಸಿರುತ್ತಾರೆ.

ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವಾ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !