ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಬ್ರಹ್ಮಗಿರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯಪಾಲರು ಸಂವಿಧಾನವನ್ನು ಗಾಳಿಗೆ ತೂರಿ, ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಖಂಡನೀಯ ಎಂದರು.
ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿಸುವ ಪ್ರಯತ್ನ ಯಶಸ್ವಿಯಾಗಲು ನಾವು ಬಿಡುವುದಿಲ್ಲ. ನ್ಯಾಯಾಂಗದ ಮೇಲೆ ನಮಗೆ ಭರವಸೆ ಇದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮಂಜುನಾಥ ಭಂಡಾರಿ, ಪ್ರಸಾದ್ ರಾಜ್ ಕಾಂಚನ್, ಗೋಪಾಲ ಪೂಜಾರಿ ಪಾಲ್ಗೊಂಡಿದ್ದರು.