ಬುಧವಾರ, ಜನವರಿ 19, 2022
24 °C

ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು.

ಆರೋಪಿಗಳು ಗೋವುಗಳನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಮೂವರು ತಪ್ಪಿಸಿಕೊಂಡು ಪರಾರಿಯಾಗಿದ್ದು, 19 ಹಸುಗಳನ್ನು ರಕ್ಷಣೆ ಮಾಡಲಾಗಿದೆ. ಗೋಕಳವು ಹಾಗೂ ಗೋಹತ್ಯೆ ತಡೆಗೆ ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು ಮತ್ತಷ್ಟು ಬಿಗಿ ಮಾಡಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದರು.

ದಾಳಿಗೊಳಗಾಗಿರುವ ಭಜರಂಗದಳ ಕಾರ್ಯಕರ್ತರಾದ ಕಿರಣ್‌ ಹಾಗೂ ಚರಣ್ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದೇನೆ. ಕಿರಣ್‌ ಬಲಕೆನ್ನೆಯ ಮೂಳೆ ಮುರಿದಿದ್ದು, ಹಲ್ಲುಗಳಿಗೆ ಪೆಟ್ಟಾಗಿದೆ. ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಜೀವಕ್ಕೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆಗೆ ಹಣಕಾಸಿನ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಗೋಕಳ್ಳರನ್ನು ಹಿಡಿದು ಕಠಿಣ ಕ್ರಮ ತೆಗೆದುಕೊಂಡರೆ ವೈಯಕ್ತಿಕವಾಗಿ ತೊಂದರೆ ಕೊಡಬಹುದು ಎಂಬ ಭಯ ಕೆಲವು ಪೊಲೀಸರಲ್ಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಧೈರ್ಯ ತುಂಬುವ ಮೂಲಕ ರಕ್ಷಣೆ ನೀಡಿ, ಗೋಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.

ನಿರಾಣಿ ಮುಂದೊಂದು ದಿನ ಸಿಎಂ:
ಮುರುಗೇಶ ನಿರಾಣಿ ಅವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಈಗಲೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿಲ್ಲ ಎಂದು ಈಶ್ವರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು